
ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯ ಉಸ್ತವಾರಿಯಿಂದ ಬಿಡುಗಡೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೆ ಪತ್ರ ಕೊಟ್ಟಿದ್ದೇನೆ ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿಬೇಕಿದೆ. ಹೀಗಾಗಿ, ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೆಲಸ ಮಾಡಬೇಕಿದೆ. ನಾನು ಯಾವ ಜಿಲ್ಲೆಗೂ ಉಸ್ತುವಾರಿ ಕೊಡಿ ಎಂದು ಕೇಳುವುದಿಲ್ಲ ಎಂದರು.
ದಲಿತ ಸಚಿವರಿಂದ ಪ್ರತ್ಯೇಕ ಸಮಾವೇಶದ ಅಗತ್ಯವನ್ನು ನಾಯಕರ ಗಮನಕ್ಕೆ ತಂದಿದ್ದೇವೆ. ನಾನು ಎಸ್ಟಿ ಸಮುದಾಯದ ಮತಗಳಿಂದ ಮಾತ್ರ ಗೆದ್ದಿಲ್ಲ. ಎಲ್ಲ ಸಮುದಾಯದ ಆಶೀರ್ವಾದ ಬೇಕು. ಕಾಂಗ್ರೆಸ್ಗೆ ಯಾವ ಸಮಾವೇಶ ಮಾಡಿದರೆ ಒಳ್ಳೆಯದೋ, ಆ ಸಮಾವೇಶ ಮಾಡಬೇಕು. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜಾಗೃತಿ ಮೂಡಿಸಬೇಕಿದೆ. ಸಮಾವೇಶದ ಅಗತ್ಯವನ್ನು ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇವೆ. ಕೇಂದ್ರದ ನಾಯಕರನ್ನು ಸಮಾವೇಶಕ್ಕೆ ಕರೆಸುತ್ತೇವೆ. ಮುಂದಿನ ದಿನಗಳಲ್ಲಿ ಸಮಾವೇಶಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ಮಾಡುತ್ತೇವೆ. ಚಿತ್ರದುರ್ಗ, ದಾವಣಗರೆ ಅಥವಾ ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಯುತ್ತದೆ. ಪಕ್ಷ ಗಟ್ಟಿಯಾದರೆ ಸಿದ್ದರಾಮಯ್ಯನವರು ಇರುತ್ತಾರೆ ಎಂದು ಹೇಳಿದರು.
ಸಮಾವೇಶ ಮಾಡಲು ಕೆಪಿಸಿಸಿ ಅಧ್ಯಕ್ಷರನ್ನು ಕೇಳಬೇಕಿಲ್ಲ. ಎಐಸಿಸಿ ಅಧ್ಯಕ್ಷರು ದೊಡ್ಡವರೋ? ಕೆಪಿಸಿಸಿ ಅಧ್ಯಕ್ಷರು ದೊಡ್ಡವರೋ? ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲೇ ಸಮಾವೇಶ ಮಾಡಲಾಗುತ್ತದೆ. ಹಾಸನದಲ್ಲೂ ಪಕ್ಷದ ವೇದಿಯಲ್ಲೇ ಸಮಾವೇಶ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷ ಯಾರಾಕಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ. ಎಐಸಿಸಿಯವರು ಅಧ್ಯಕ್ಷ ಆಗು ಅಂದರೆ ಆಗುತ್ತೇನೆ. ಮಂತ್ರಿಸ್ಥಾನ ಬಿಟ್ಟು ಅಧ್ಯಕ್ಷನಾಗುತ್ತೇನೆ. ಒನ್ ಮ್ಯಾನ್ ಒನ್ ಪೋಸ್ಟ್ಗೆ ಬದ್ಧನಾಗಿರುತ್ತೇನೆ ಎಂದು ಇಂಗಿತ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ