![](https://pragativahini.com/wp-content/uploads/2023/06/Breaking-News-2.jpg)
ಪ್ರಗತಿವಾಹಿನಿ ಸುದ್ದಿ: ರೈತ ಮುಖಂಡ ಕುರಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಶಾಂತಕುಮಾರ್ ಸೇರಿದಂತೆ ಇಬ್ಬರು ರೈತ ಮುಖಂಡರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಂಜಾಬ್ ನ ಪಟಿಯಾಲ ಬಳಿ ನಡೆದಿದೆ.
ದೆಹಲಿಹಲಿಯ ಕನೋಲಿ ಬಾರ್ಡರ್ ನಲ್ಲಿ ನಡೆಯುತ್ತಿದ್ದ ರೈತ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಪಟಿಯಾಲ ಬಳಿ ಕಾರು ಅಪಘಾತಕ್ಕೀಡಾಗಿದೆ. ಕುರುಬೂರು ಶಾಂತಕುಮಾರ್ ಹಾಗೂ ತಮಿಳುನಾಡು ಮೂಲದ ರೈತ ಮುಖಂಡ ಪಾಂಡಿಯನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ರೈತ ಸಂಘಟನೆಗಳು ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ದೆಹಲಿ ಬಾರ್ಡರ್ ಕನೋಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ರೈತ ಮುಖಂಡರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ