
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಮುಖಂಡ ಬಿ.ಕೆ.ಅಲ್ತಾಫ್ ಖಾನ್ ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಪಿಎಫ್ ಐ ಹೆಸರು ಉಲ್ಲೇಖಿಸಿ ಬೆದಿರಿಕೆ ಕರೆ ಮಡಲಾಗಿದೆ ಎಂದು ಮುಖಂಡರು ದೂರು ನೀಡಿದ್ದಾರೆ.
ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ.ಕೆ.ಅಲ್ತಾಫ್ ಖಾನ್, ತಮಗೆ ಅಪರುಇಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬರುತ್ತಿರುವುದಾಗಿ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪಿಎಫ್ ಐ ಸಂಘಟನೆಯೊಂದಿಗೆ ಆಟವಾಡಬೇಡ. ಆರ್ ಎಸ್ ಎಸ್ ಏಜೆಂಟ್ ಆಗಿ ಕೆಲಸ ಮಡಬೇಡ. ನಾಳೆ ನಿನ್ನ ಮಗಳ ಮದುವೆ ಇದೆ. ನಮ್ಮಿಂದ ನೀನು ಹಲವು ಬಾರಿ ಬಚಾವ್ ಆಗಿದ್ದೀಯಾ. ಇನ್ಮುಂದೆ ನೀನು ಬಚಾವ್ ಆಗಲು ಆಗಲ್ಲ. ನಿನ್ನ ತಮ್ಮಂದಿರನ್ನು ನೀನು ಉಳಿಸಿಕೊಳ್ಳಲು ಸಾಧ್ಯವಾಗಲ್ಲ. ನಿನ್ನನ್ನು ಹಾಗೂ ನಿನ್ನ ಕುಟುಂಬದವರನ್ನು ಜೀವ ಸಹಿತ ಬಿಡಲ್ಲ. ನೀನಿ ಕೋರ್ಟ್ ಗೆ ಸಾಕ್ಷಿ ಹೇಳಲು ಹೋಗಬಾರದು ಹೋದರೆ ನೀನು ಉಳಿಯಲ್ಲ ಎಂದು ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ