
ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಇಬ್ಬರು ಯುವತಿಯರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಕ್ಷೇತ್ರದಲ್ಲಿ ನಡೆದಿದೆ.
ಸಂಬಂಧಿಕರ ಜೊತೆ ಧಾರ್ಮಿಕ ಕಾರ್ಯಕ್ಕೆಂದು ಮುತ್ತತ್ತಿ ಕ್ಷೇತ್ರಕ್ಕೆ ಬಂದಿದ್ದ ಯುವತಿಯರು ಪುಣ್ಯಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಶೋಭಾ (23) ಹಾಗೂ ನಾದಿಯಾ (19) ಮೃತ ಯುವತಿಯರು. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ