Karnataka News
*ಇನ್ನೂ ಪತ್ತೆಯಾಗದ ಬೀದರ್ ATM ದರೋಡೆಕೋರರು: ಸುಳಿವು ನೀಡಿದವರಿಗೆ ಭಾರಿ ಬಹುಮಾನ ಘೋಷಿಸಿದ ಪೊಲೀಸರು*

ಬೀದರ್ ಎಟಿಎಂ ದರೋಡೆ, ಇಬ್ಬರು ಸಿಬ್ಬಂದಿಗಳ ಹತ್ಯೆ ಪ್ರಕರಣ ನಡೆದು ಒಂದು ತಿಂಗಳು ಕಳೆಯುತ್ತಾ ಬಂದರೂ ಈವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಈ ನಡುವೆ ದರೋಡೆಕೋರರ ಭಾವಚಿತ್ರ ಬಿಡುಗಡೆ ಮಾಡಿರುವ ಪೊಲೀಸರು ಆರೋಪಿಗಳ ಸುಳಿವು ನೀಡಿವರಿಗೆ ಬಹುಮಾನ ಘೋಷಿಸಿದ್ದಾರೆ.
ಜ.16ರಂದು ಬೀದರ್ ನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಎಂಎಸ್ ಕಂಪನಿ ಸಿಬ್ಬಂದಿಗಳನ್ನು ಗುಂಡಿಟ್ಟು ಹತ್ಯೆಗೈದು, ಅವರ ಬಳಿ ಇದ್ದ 83 ಲಕ್ಷ ಹಣವನ್ನು ದೋಚಿ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿದ್ದ ದರೋಡೆಕೋರರು ಹೈದರಾಬಾದ್ ನತ್ತ ಪರಾರಿಯಾಗಿದ್ದರು. ಆ ಬಳಿಕ ಅವರ ಪತ್ತೆಯಾಗಿಲ್ಲ.
ಆರೋಪಿಗಳು ಬಿಹಾರ ಮೂಲದ ಅಮನ್ ಕುಮಾರ್, ಅಲೋಕ್ ಕುಮಾರ್ ಎಂದು ಗುರುತಿಸಲಾಗಿದ್ದು, ಇಬ್ಬರ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಆರೋಪಿಗಳ ಸುಳಿವು ಕೊಟ್ಟವರಿಗೆ 5 ಲಕ್ಷ ರೂ.ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ