
ಪ್ರಗತಿವಾಹಿನಿ ಸುದ್ದಿ: ನವದೆಹಲಿಯ ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 15 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ದುರಂತದಲ್ಲಿ 11 ಜನರು ಗಾಯಗೊಂಡಿದ್ದಾರೆ.
ತಡರಾತ್ರಿ 14 ಹಾಗೂ 15ನೇ ಪ್ಲಾಟ್ ಫಾರ್ಮ್ ಗೆ ಏಕಾಏಕಿ ನೂರಾರು ಪ್ರಯಾಣಿಕರು ನುಗ್ಗಿದ ಪರಿಣಾಮ ಈ ದುರಂತ ಸಂಭವಿಸಿದೆ.
ದೆಹಲಿಯಿಂದ ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್ ರಾಜ್ ಗೆ ತೆರಳಲು ವಿವಿಧ ರಾಜ್ಯಗಳಿಂದ ದೆಹಲಿ ರೈಲು ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣಕ್ಕೆ ನುಗ್ಗಿದ್ದಾರೆ. ಪ್ಲಾಟ್ ಫಾರ್ಮ್ 14 ಹಾಗೂ 15ರಲ್ಲಿ ನಿಂತಿದ್ದ ಪ್ರಯಾಗ್ ರಾಜ್ ಗೆ ಹೊರಡಿವ ವಿಶೇಷ ರೈಲಿನ ಜನರಲ್ ಬೋಗಿಗೆ ಪ್ರಯಾಣಿಕರು ಹತ್ತುವ ವೇಲೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.
ದುರಂತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ