
ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ.
ಥನವ್ ರೆಡ್ಡಿ (2) ಮೃತ ಮಗು. ಜೆಸಿಬಿ ಚಾಲಕನ ಅತಿಯಾದ ವೇಗ, ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.
ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಜೆಸಿಬಿ ಚಾಲಕ ನಾಪತ್ತೆಯಾಗಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ