
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಅವರಿಗೆ ಜೀವ ಬೆದರಿಕೆ ಹಾಕಿದ್ದ ದುಷ್ಕರ್ಮಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮಹಾ ಡಿಸಿಎಂ ಏಕನಾಥ್ ಶಿಂಧೆ ಅವರ ಕಾರಿನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮಂಗೇಶ್ ಅಚ್ಯುತ್ ರಾವ್, ಅಭಯ್ ಗಜಾನನ ಶಿಂಗಾನೆ ಎಂದು ಗುರುತಿಸಲಾಗಿದೆ. ಬಂಧಿತರು ದಿಯುಲ್ಗಾಂವ್ ಮಾಹಿ ಬುಲ್ದಾನ ನಿವಾಸಿಗಳು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ