
ಪ್ರಗತಿವಾಹಿನಿ ಸುದ್ದಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರಾಜ್ ಪುರ ಬಳಿ ನಡೆದಿದೆ.
ಬೀದರ್ ಜಿಲ್ಲೆಯ 12 ಜನರು ಕ್ರೂಸರ್ ನಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದರು. ಈ ವೇಳೆ ಮೀರಜ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೀದರ್ ನ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. 7 ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಶಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ