Karnataka News

*ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಧಗಧಗನೆ ಹೊತ್ತಿ ಉರಿದ ಅರಣ್ಯ ಪ್ರದೇಶ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ.

ಚಾಮುಂಡಿ ಬೆಟ್ಟದಿಂದ ಉತ್ತನಹಳ್ಳಿಗೆ ಹೋಗುವ ಮಾರ್ಗದಲ್ಲಿ ಬೆಟ್ಟ ಪ್ರದೇಶದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಅರಣ್ಯ ಪ್ರದೇಶದ ತುಂಬೆಲ್ಲ ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದೆ. ಬೆಂಕಿಯಿಂದಾಗಿ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ.

ಬಿಸಿಲ ಝಳದ ನಡುವೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button