Belagavi NewsBelgaum NewsKarnataka News
*ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲಿಸರು ಬಧಿಸಿದ್ದಾರೆ.
ಮಹದೇವ್ ಹಲ್ಲೆಗೊಳಗಾದ ಬಸ್ ಕಂಡಕ್ಟರ್. ನಿನ್ನೆ ಚಲಿಸುತ್ತಿದ್ದ ಬಸ್ ನಲ್ಲಿ ಮರಾಠಿಯಲ್ಲಿ ಟಿಕೆಟ್ ಕೇಳಿದ್ದಕ್ಕೆ ನನಗೆ ಮರಾಠಿ ಬರಲ್ಲ ಕನ್ನಡದಲ್ಲಿ ಮಾತನಾಡಿ ಎಂದು ಕಂಡಕ್ಟರ್ ಹೇಳಿದ್ದಕ್ಕೆ ಬಸ್ ನಲ್ಲಿದ್ದ ಮರಾಠಿ ಯುವಕರು ಕಂಡಕ್ಟರ್ ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿ ಮರಾಠಿ ಮಾತನಾಡುವಂತೆ ಒತ್ತಾಯಿಸಿದ್ದರು.
ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣ ಸಂಬಂಧ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ