
ಪೋಕ್ಸೋ ಕೇಸ್ ದಾಖಲು
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಕಂಡಕ್ಟರ್ ಮಹದೇವಪ್ಪ ಹುಕ್ಕೇರಿ, ಬಸ್ ನಲ್ಲಿ ಯುವತಿ ಮರಾಠಿಯಲ್ಲಿ ಟಿಕೆಟ್ ಕೇಳಿದ್ದಕ್ಕೆ, ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದರು. ಇಷ್ಟಕ್ಕೆ ಬಸ್ ನಲ್ಲಿದ್ದ ಮರಾಠಿ ಪುಂಡರು ಕಂಡಕ್ಟರ್ ಮೇಲೆ ಹಿಗ್ಗಾ ಮುಗ್ಗಾ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ನಡುವೆ ಬಸ್ ನಲ್ಲಿ ಬಾಲಕಿ ಮೇಲೆ ಕಂಡಕ್ಟರ್ ಮಹದೇವಪ್ಪ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹದೇವಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ