
ಪ್ರಗತಿವಾಹಿನಿ ಸುದ್ದಿ : ರಾಜಧಾನಿ ಬೆಂಗಳೂರು ಕ್ರೈಂ ಸಿಟಿ ಅಗೋಗ್ತಿದೆ. ಶನಿವಾರ ರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ನಡುರಸ್ತೆಯಲ್ಲಿಯೇ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಅವರನ್ನು ಹೊಡೆದುರುಳಿಸಲಾಗಿದೆ. ಅಶೋಕ ನಗರದ ಗರುಡ ಮಾಲ್ ಬಳಿ ಮಧ್ಯರಾತ್ರಿ 1 ಗಂಟೆಗೆ ಈ ದುರ್ಘಟನೆ ನಡೆದಿದೆ.
ಹತ್ಯೆಯಾದ ಹೈದರ್ ಅಲಿ, ಶಾಸಕ ಎನ್.ಎ.ಹ್ಯಾರಿಸ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದರು. ಅವರ ಪರ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದರು. ಹಳೇ ದ್ವೇಷವೇ ಘಟನೆಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
ಲೈವ್ ಬ್ಯಾಂಡ್ ಕಾರ್ಯಕ್ರಮವೊಂದರಿಂದ ಸ್ನೇಹಿತನ ಜೊತೆ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಹೈದರ್ ಅಲಿ ಮೇಲೆ ಹಂತಕರು ಅಟ್ಯಾಕ್ ಮಾಡಿದ್ದಾರೆ. ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ಹೈದರ್ ಕೊನೆಯುಸಿರೆಳೆದರು. ಈ ವೇಳೆ ಬಂದ ಅವರ ಬೆಂಬಲಿಗರು ಲಾಂಗ್, ಮಚ್ಚು ಹಿಡಿದು ಓಡಾಡಿ ಹೈಡ್ರಾಮಾ ಸೃಷ್ಟಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ