
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾನಗರ ಪಾಲಿಕೆ ವತಿಯಿಂದ ಫೆ.24 ರಿಂದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬೃಹತ್ ಇ-ಖಾತಾ ಮೇಳ ಆಯೋಜಿಸಲಾಗಿದ್ದು, ಎಲ್ಲ ಕನಿಷ್ಠ ದಾಖಲೆಗಳನ್ನು ಸಲ್ಲಿಸಿ ‘ಎ’ ಮತ್ತು ‘ಬಿ’ ಖಾತಾ ಪಡೆದುಕೊಳ್ಳಬೇಕು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ .
ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಇವರು ಫೆಬ್ರುವರಿ 17, 2025 ರಂದು ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಪ್ರಮಾಣಿಕ ಕಾರ್ಯವಿಧಾನ (SOP) ನ್ನು ಹೊರಡಿಸಿರುತ್ತಾರೆ.
ಅದರಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ 3 ತಿಂಗಳೊಳಗಾಗಿ ನೀಡಲು ಉದ್ದೇಶಿಸಲಾಗಿದೆ.
“ಎ” ರಿಜಿಸ್ಟರ್‌ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ ದಾಖಲೆಗಳು:
ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು/ದಾನಪತ್ರ/ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ಮಂಜೂರಾತಿ ಪತ್ರಗಳು/ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕು ಪತ್ರ.
ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಡೀಕೃತ ಪ್ರತಿ ಮತ್ತು ನಿವೇಶನಗಳು ಬಿಡುಗಡೆ ಪತ್ರ, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ ಹಾಗೂ ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿ ಸಲ್ಲಿಸಬೇಕು.
“ಬಿ”ರಿಜಿಸ್ಟರ್‌ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ ದಾಖಲೆಗಳು:
ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ 10.03.2024 ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು/ದಾನಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ ಮಾಲೀಕರ ಗುರುತಿನ ದಾಖಲೆ ಪ್ರತಿ ಸಲ್ಲಿಸಬೇಕು.
ಸಾರ್ವಜನಿಕರಿಗೆ ಸದರಿ ಬೃಹತ್ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಶುಭ.ಬಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ