Karnataka News

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬಿರು ಬೇಸಿಗೆಯ ನಡುವೆ ರಾಜ್ಯದ ಹಲ್ವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳಕ್ಕೆ ಜನರು ಹೈರಾಣಾಗಿದ್ದಾರೆ. ಇದೇ ವೇಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಇದು ರಾಜ್ಯದ ಹಲವು ಭಾಗಗಳ ಮೇಲೆ ಪರಿಣಾಮ ಬೀರಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ತುಮಕೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಕಳೆದ 24 ಗಂಟೆಯಲ್ಲಿ ವಿಜಯಪುರದಲ್ಲಿ ಕನಿಷ್ಠ ತಾಪಮಾನ -2.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿಯಲ್ಲಿ ಗರಿಷ್ಠ 34-36 ಡಿಗ್ರಿ, ಬೀದರ್, ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಹಾವೇರಿಯಲ್ಲಿ 33-35, ಕಲಬುರಗಿ, ಬಾಗಲಕೋಟೆ 36-38 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Back to top button