
ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶಾಕ್ ನೀಡಿದ್ದಾರೆ. ಉದ್ಯಮಿಗಳು, ರಿಯಲ್ ಎಸ್ಟೇಟ್ ಬಿಲ್ಡರ್ ಗಳನ್ನು ಗುರಿಯಾಗಿಸಿ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
30 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ರೇಡ್ ಮಾಡಿದ್ದು, ತೆರಿಗೆ ವಂಚನೆ ದೂರು ಕೇಳಿಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ. ದೆಹಲಿ ಮೂಲದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಪ್ರಮುಖವಾಗಿ ಪ್ರೆಸ್ಟೀಜ್ ಗ್ರೂಪ್ ನ ಎಂಜಿ ರಸ್ತೆಯಲ್ಲಿರುವ ಮುಖ್ಯ ಕಚೇರಿ ಸೇರಿದಂತೆ ನಾಲ್ಕು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಏಕಕಾಲಕ್ಕೆ ಅಧಿಕಾರಿಗಳ ತಂಡ ರೇಡ್ ಮಾಡಿದ್ದು, ತಲಾಶ್ ಮುಂದುವರಿದಿದೆ.
ಅಪಾರ್ಟೆಂಟ್ ನಿರ್ಮಾಣ ಸೇರಿ ಹಲವು ಉದ್ಯಮಗಳನ್ನು ಪ್ರೆಸ್ಟೀಜ್ ಗ್ರೂಪ್ ಹೊಂದಿದೆ. ಪ್ರೆಸ್ಟೀಜ್ ಗ್ರೂಪ್ ಗೆ ಸಂಬಂಧಿಸಿದಂತೆ ನಾಲ್ಕು ಕಡೆ ಏಕಾಏಕಿ ದಾಳಿ ಮಾಡಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ