National

*ಇಂದೂ ಕೂಡ ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ*

ಪ್ರಯಾಣಿಕರ ಪರದಾಟ


ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವ ಘಟನೆ ಬೆನ್ನಲೇ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದೆ.

ಕಳೆದ ಮೂರು ದಿನಗಳಿಂದ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಎರಡೂ ರಾಜ್ಯಗಳ ಬಸ್ ಗಳು ಗಡಿ ಜಿಲ್ಲೆಗಳವರೆಗೆ ಮಾತ್ರ ಸಂಚರಿಸುತ್ತಿದ್ದು, ಪ್ರಯಾಣಿಕರು ಅಲ್ಲಿಂದ ಬೇರೆ ವಾಹನಗಳ ಮೂಲಕ ತೆರಳಬೇಕಾದ ಸ್ಥಿತಿ.

Home add -Advt

ಇಂದು ಕೂಡ ಬೆಳಗಾವಿ, ಮಹಾರಾಷ್ಟ್ರದ ಗಡಿ ಭಾಗದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಹಿನ್ನೆಲೆಯಲ್ಲಿ ಇಂದು ಸಹ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ನಡೆಸುತ್ತಿಲ್ಲ. ಇಂದು ಸಂಜೆವರೆಗೆ ಪರಿಸ್ಥಿತಿ ನೋಡಿಕೊಂಡು ನಾಳೆಯಿಂದ ಬಸ್ ಸಂಚಾರಕ್ಕೆ ಮಾರ್ಗ ಸೂಚಿ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button