
ಪ್ರಗತಿವಾಹಿನಿ ಸುದ್ದಿ: ಮಹಿಳಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಅವರಿಗೆ ಅಶ್ಲೀಲ ಸನ್ನೆ ಮಾಡಿದ್ದ ಕಾರು ಚಾಲಕ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿ ಕುಮಾರ್ ಫೆ.27ರಂದು ಬೆಂಗಳೂರಿನ ಗೋಪಾಲನ್ ಮಾಲ್ ಬಳಿ ತೆರಳುತ್ತಿದ್ದ ವೇಳೆ, ಐಷಾರಾಮಿ ಕಾರಿನಲ್ಲಿ ಬಂದ ಯುವಕನೊಬ್ಬ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದಾನೆ. ಇದನ್ನು ಅಕ್ಷತಾ ರವಿಕುಮಾರ್ ಪ್ರಶ್ನೆ ಮಡಿದ್ದಾರೆ.ಇದಕ್ಕೆ ಕಾರು ಚಲಾಯಿಸುತ್ತಿದ್ದ ಯುವಕ ಅಶ್ಲೀಲವಾಗಿ ತನ್ನ ಮಧ್ಯದ ಬೆರಳು ತೋರಿಸಿದ್ದಾನೆ. ನಡುರಸ್ತೆಯಲ್ಲಿ ಅಸಭ್ಯವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಿರುವ ಯುವಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆ ಸಂಬಂಧ ಚಾಮರಾಜಪೇಟೆ ಠಾಣೆಯಲ್ಲಿ ಕಾರುಚಾಲಕ ಯುವಕ ಹರ್ಷ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಆರೋಪಿ ಹರ್ಷನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ