
ಪ್ರಗತಿವಾಹಿನಿ ಸುದ್ದಿ: ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಕಲಬುರಗಿ ಇಎಸ್ ಐ ಆಸ್ಪತ್ರೆಯಲ್ಲಿ ಬಾಣಂತಿ ಸಾವನ್ನಪ್ಪಿದ್ದಾರೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಶಿಲ್ಪಾ (32) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ತೀವ್ರ ಹೆರಿಗೆ ನೋವಿನ ಹಿನ್ನಲೆ ಶಿಲ್ಪಾರನ್ನು ನಗರದ ಸೇಡಂ ರಸ್ತೆಯಲ್ಲಿರುವ ಇಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶಿಲ್ಪಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಿರಂತರ ರಕ್ತ ನೀಡಿದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಶಿಲ್ಪಾ ಸಾವನ್ನಪ್ಪಿದ್ದಾರೆ ಎಂದು ಪೋಷಕರು ಆರೋಪಿಸಿದ್ದು, ಇತ್ತ ವೈದ್ಯರು ಲೋ ಬಿಪಿಯಿಂದ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ