*MES ವಿರುದ್ಧ ಸಿಡಿದೆದ್ದ ಕನ್ನಡಿಗರು: ಮಾ.7ರಂದು ಬೆಳಗಾವಿ ಚಲೋ; ಮಾರ್ಚ್ 3ರಿಂದ 22ರವರೆಗೆ ಬೃಹತ್ ಹೋರಾಟಕ್ಕೆ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಎಂಇಎಸ್ ಪುಂಡರ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಮಾರ್ಚ್ ತಿಂಗಲಿನಲ್ಲಿ ಸಾಲು ಸಾಲು ಹೋರಾಟಕ್ಕೆ ಸಜ್ಜಾಗಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೃಹತ್ ಪ್ರತಿಭಟನೆಗಳಿಗೆ ದಿನಾಂಕ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 3ರಿಂದ ಮಾರ್ಚ್ 22ರ ವರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಮಾರ್ಚ್ 3ರಂದು ರಾಜಭವನ ಮುತ್ತಿಗೆ ಹಾಕಲಾಗುವುದು. ಕನ್ನಡಿಗ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಮಾರ್ಚ್ 7ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ಹೋರಾಟಕ್ಕೆ ಸಜ್ಜಾಗಿದ್ದೇವೆ. ಮಾರ್ಚ್ 11ರಂದು ಅತ್ತಿಬೆಲೆ ಗಡಿ ಬಂದ್ ಹೋರಾಟಕ್ಕೆ ಕರೆ ನೀಡಲಾಗಿದೆ. ಮಾರ್ಚ್ 16ರಂದು ಹೊಸಕೋಟೆ ಟೋಲ್ ಬಂದ್ ಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಕರೆ ನೀಡಲಾಗಿದೆ. ಅಂದು ರಾಜ್ಯಾಧ್ಯಂತ ಬಸ್ ಸಂಚಾರ, ಹೋಟೆಲ್, ಆಟೋ, ಕ್ಯಾಬ್ ಸಂಚಾರ ಎಲ್ಲವೂ ಸಂಪೂರ್ಣ ಸ್ಥಗಿತಗೊಳಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ