Belagavi NewsBelgaum News
*ಬೆಳಗಾವಿಯಲ್ಲಿ ಮತ್ತೊಂದು ಘಟನೆ: ಮೊಬೈಲ್ ಸಿಮ್ ಕಾರ್ಡ್ ಗಾಗಿ ವ್ಯಕ್ತಿಗೆ ಚಾಕು ಇರಿದ ಗ್ಯಾಂಗ್*

ಪ್ರಗತಿವಾಹಿನಿ ಸುದ್ದಿ: ಮೊಬೈಲ್ ಸಿಮ್ ಕಾರ್ಡ್ ಗಾಗಿ ಯುವಕರ ಗ್ಯಾಂಗ್ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿಯ ಬೋಗಾರವೇಸ್ ನ ಹನುಮಾನ್ ದೇವಸ್ಥಾನದ ಬಳಿ ನಡೆದಿದೆ.
ಸುರೇಶ್ ವಾರಂಗ್ ಹಲ್ಲೆಗೊಳಗಾದ ವ್ಯಕ್ತಿ. ನಿಖಿಲ್ ಕರುಣೆ ಹಾಗೂ ಗ್ಯಾಂಗ್ ಸುರೇಶ್ ಮೇಲೆ ಹಲ್ಲೆ ನಡೆಸಿ ಚಾಕು ಇರಿದಿದೆ ಎಂಬ ಆರೋಪ ಕೇಳಿಬಂದಿದೆ.
ಸುರೇಶ್ ತೊಡೆಯ ಭಾಗದಲ್ಲಿ ಚಾಕು ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಸುರೇಶ್ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ