
ಪ್ರಗತಿವಾಹಿನಿ ಸುದ್ದಿ : ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ರವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರಿನ ಲಕ್ಯ ಕ್ರಾಸ್ ಬಳಿ ನಡೆದಿದ್ದು ಘಟನೆಯಲ್ಲಿ ಯಾರಿಗೂ ಪ್ರಾಣಪಾಯವಾಗಿಲ್ಲ.
ಮಾಹಿತಿಯ ಪ್ರಕಾರ ವಿಜೇಂದ್ರ ರವರು ಅಪಘಾತಕೀಡಾದ ವಾಹನದ ಮುಂಭಾಗದಲ್ಲಿ ಚಲಿಸುತ್ತಿದ್ದ ಮತ್ತೊಂದು ಕಾರಿನಲ್ಲಿ ಸಂಚರಿಸುತ್ತಿದ್ದರು ಎಂದು ತಿಳಿದುಬಂದಿದೆ.
ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ವಿಜಯೇಂದ್ರ ಹಾಗೂ ಅವರ ತಂಡ ಎರಡು ಕಾರುಗಳಲ್ಲಿ ಪ್ರಯಾಣಿಸುತ್ತಿದ್ದರು. ಬಿ ವೈವಿ ರವರ ಕಾರಿನ ಹಿಂದೆ ಬರುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಸ್ಥಳಕ್ಕಾಗಮಿಸಿದ ಲಕ್ಯ ಠಾಣಾ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ