
ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಚಿಕ್ಕಂದುವಾಡಿ ಗ್ರಾಮದ ಬಳಿ ನಡೆದಿದೆ.
ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರು ರಸ್ತೆ ಪಕ್ಕದಲ್ಲಿ ಹೋಗಿ ಬಿದ್ದಿದೆ. ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಮೃತರು ಮಂಡ್ಯ ಮೂಲದವರೆಂದು ತಿಳಿದುಬಂದಿದೆ.
ಕಾರು ಮಲೈ ಮಹದೇಶ್ವರ ಬೆಟ್ಟದತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೊಳ್ಳೆಗಾಲ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ