
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಸೂಟ್ ಕೇಸ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಪತ್ತೆಯಾಗ ಸೂಟ್ ಕೇಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22) ಶವ ಪತ್ತೆಯಾಗಿದೆ.
ಹಿಮಾನಿ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ಸಾರ್ವಜನಿಕರು ಸೂಟ್ ಕೇಸ್ ಇರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಸೂಟ್ ಕೇಸ್ ತೆಗೆದು ನೋಡಿದಾಗ ಶವ ಪತ್ತೆಯಾಗಿದ್ದು, ಅದು ಕಾಂಗ್ರೆಸ್ ಕಾರ್ಯಕರ್ತೆಯದ್ದು ಎಂದು ತಿಳಿದುಬಂದಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಹಿಮಾನಿ ಸಾವಿನ ಬಗ್ಗೆ ಕಾಂಗ್ರೆಸ್ ಶಾಸಕರು ಎಸ್ ಐಟಿ ರಚನೆ ಮಾಡಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ