
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಮನೆಯಿಂದ ಹೊರ ಹೋದ ವ್ಯಕ್ತಿಯೊಬ್ಬ ಕಾರಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ಅಶ್ವಿನ್ ಕುಮಾರ್ (47) ಮೃತ ವ್ಯಕ್ತಿ. ಕೊಡಿಗೆಹಳ್ಳಿ ಬ್ರಿಡ್ಜ್ ಬಳಿಯ ಖಾಸಗಿ ಆಸ್ಪತ್ರೆಯ ಮುಂಭಾಗ ಕಾರಿನಲ್ಲಿಯೇ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಶ್ವಿನ್ ಕುಮಾರ್, ಮನೆಯಿಂದ ಹೊರಹೋಗಿದ್ದವರು ವಾಪಸ್ ಬಂದಿಲ್ಲ. ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಲೊಕೇಷನ್ ಟ್ರ್ಯಾಕ್ ಮಾಡಿದ ಪೊಲೀಸರು ಕಾರು ನಿಂತಿದ್ದ ಜಾಗಕ್ಕೆ ಬಂದಿದ್ದಾರೆ. ಕಾರಿನಲ್ಲಿ ನೋಡಿದಾಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಕಾರಿನ ಗಾಜು ಒಡೆದು ಪರಿಶೀಲಿಸಿದಾಗ ಅದಾಗಲೇ ಅಶ್ವಿನ್ ಸಾವನ್ನಪ್ಪಿದ್ದರು. ಅವರ ಕೈ ಮೇಲೆ ಸುಟ್ಟ ಗಾಯ ಪತ್ತೆಯಾಗಿದ್ದು, ಕುಟುಂಬದವರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ