Politics

*ಕಲಾವಿದರು ನಿಮ್ಮ ಪಕ್ಷದ ಕಾರ್ಯಕರ್ತರಲ್ಲ: ಡಿಸಿಎಂಗೆ ಆರ್.ಅಶೋಕ್ ಟಾಂಗ್*

ಪ್ರಗತಿವಾಹಿನಿ ಸುದ್ದಿ: ಮೇಕೆದಾಟು ಯೋಜನೆ ಹೋರಾಟಕ್ಕೆ ಚಲನಚಿತ್ರರಂಗದಿಂದ ಸಹಕಾರ ಸಿಗದಿರುವುದು ದುರಂತ. ಇದರಿಂದ ನನಗೆ ಬೇಸರವಿದೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತಿಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ.

ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದಿದ್ದಾರೆ.

ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯವಿದೆ, ಹಕ್ಕಿದೆ.

Home add -Advt

ಕಲಾವಿದರು ನಿಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button