
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವೆ ರಕ್ಷಾ ಖಾಡ್ಸೆ ಅವರ ಅಪ್ರಾಪ್ತ ಮಗಳಿಗೆ ಕಿರುಕುಳ ನೀಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಜಲಗಾಂವ್ ನಲ್ಲಿ ನಡೆದ ಸಂತ ಮುಕ್ತಾಯಿ ಯಾತ್ರೆ ಸಂದರ್ಭದಲ್ಲಿ ಯುವಕರು, ಕೇಂದ್ರ ಸಚಿವೆ ರಕ್ಷಾ ಅವರ ಅಪ್ರಾಪ್ತ ಪುತ್ರಿ ಹಾಗೂ ಇತರ ಹುಡುಗಿಯರಿಗೆ ಕಿರುಕುಳ ನೀಡಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ರಕ್ಷಾ ಖಾಡ್ಸೆ ದೂರು ದಾಖಲಿಸಿದ್ದಾರೆ. ಪ್ರತಿ ವರ್ಷ ಮಹಾಶಿವರಾತ್ರಿ ಸಂದರ್ಭದಲ್ಲಿ ಸಂತ ಮುಕ್ತಾಯಿ ಯಾತ್ರೆ ನಡೆಯುತ್ತದೆ. ಎರಡು ದಿನಗಳ ಹಿಂದೆ ನನ್ನ ಮಗಳು ಯಾತ್ರೆಗೆ ಹೋಗಿದ್ದಳು. ಈ ವೇಳೆ ಕೆಲ ಯುವಕರು ಆಕೆಗೆ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಇಂತಹ ಘಟನೆಯನ್ನು ಕ್ಷಮಿಸಲು ಸಾಧ್ಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ