
ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ
ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು.
ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ… ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು.
ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ