
ಪ್ರಗತಿವಾಹಿನಿ ಸುದ್ದಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಸಂಬಂಧಿ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಲಾಕ್ ಮಾಡಿದ್ದಾರೆ.
ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಅಕ್ರಮ ಚಿನ್ನ ಸಾಗಾಟ ಆರೋಪದಲ್ಲಿ ಆಕೆಯನ್ನು ಏರ್ಪೋಟ್ ಕಸ್ಟಮ್ಸ್ ಡಿಆರ್‌ಐ ತಂಡದ ಅಧಿಕಾರಿಗಳಿಂದ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಅಧಿಕಾರಿಗಳು ರನ್ಯಾ ರನ್ನು ವಶಕ್ಕೆ ಪಡೆದಿದ್ದಾರೆ. ಬೇರೆ ದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಾಣಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಐಪಿಎಸ್ ಅಧಿಕಾರಿಯ ಹತ್ತಿರದ ಸಂಬಂಧಿಯಾಗಿರುವ ರನ್ಯಾರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕನ್ನಡದ ‘ಮಾಣಿಕ್ಯ’ ‘ಪಟಾಕಿ’ ಹಾಗೂ ತಮಿಳಿನ ‘ವಾಘಾ’ ಸಿನಿಮಾಗಳಲ್ಲಿ ರನ್ಯಾ ರಾವ್ ನಟಿಸಿದ್ದರು. ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ