
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ನಡೆಯುತ್ತಿರು ಸಿಎಂ ಬದಲಾವಣೆ ಚರ್ಚೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿನ ಖರ್ಗೆ ನಿವಾಸಕ್ಕೆ ಭೇಟಿ ನೀಡಿ, ಪ್ರಸಕ್ತ ರಾಜಕೀಯ ಸನ್ನಿಸವೇಶಗಳ ಬಗ್ಗೆ ಚರ್ಚಿಸಿದ್ದಾರೆ. ಬಣ ರಾಜಕೀಯ, ಸಿಎಂ ಹುದ್ದೆ ಬದಲಾವಣೆ ಹಾಗೂ ಮುಂಬರುವ ಎಲೆಕ್ಷನ್ ಗಳ ಬಗೆಗಿನ ವಿಚಾರಗಳ ಕುರಿತು ಚರ್ಚಿಸಲಾಗಿದೆ.
ಬಹಿರಂಗ ಹೇಳಿಕೆ ನೀಡದಂತೆ ಹಾಗೂ ಅಸಮಾಧಾನದ ಬಗ್ಗೆ ಮಾತಾಡದಂತೆ ಮಲ್ಲಿಕಾರ್ಜುನ ಖರ್ಗೆ ಡಿಸಿಎಂ ಡಿಕೆಶಿಗೆ ಸೂಚನೆ ರವಾನಿಸಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ