
ಪ್ರಗತಿವಾಹಿನಿ ಸುದ್ದಿ: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ.
22 ವರ್ಷದ ಉಲ್ಲಾಸ್ ಮುರುಳಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಎಂಜಿನಿಯರಿಂಗ್ 4ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ. ಒಂದು ವಿಷಯದಲ್ಲಿ ಫೇಲ್ ಆಗಿದ್ದ ಎನ್ನಲಾಗಿದೆ. ಇದೀಗ ಏಕಾಏಕಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಮೃತದೇಹವನ್ನು ಕೆರೆಯಿಂದ ಹೊರ ತೆಗೆದ ಬಳಿಕ ಪೊಲೀಸರು ಕಸದ ವಾಹನದಲ್ಲಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ ಎನ್ನಲಾಗಿದೆ. ಮಾನವೀಯತೆಯನ್ನು ಮರೆತು ಪೊಲೀಸರು ನಡೆದಿಕೊಂಡಿದ್ದಾರೆ ಎಂದು ಸಾರ್ವಜನಿಕರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ