
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಎರಡನೇ ಅತಿದೊಡ್ಡ ಬಲ್ಡೋಟ ಸ್ಟೀಲ್ ಫ್ಯಾಕ್ಟರಿ ಕೊಪ್ಪಳದಲ್ಲಿ ಆರಂಭವಾಗುತ್ತಿದ್ದು, ಕಾಮಗಾರಿ ಸ್ಥಗಿತಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬಲ್ಡೋಟ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಕೊಪ್ಪಳ ಬಂದ್ ಪ್ರತಿಭಟನೆ ಕೂಡ ನಡೆದಿತ್ತು. ಗವಿಮಠದ ಸ್ವಾಮೀಜಿ ಫ್ಯಾಕ್ಟರಿ ಆರಂಭ ಮಾಡಬಾರದು ಎಂದು ಒತ್ತಾಯಿಸಿ ಹೋರಾಟ ನಡೆಸಿದ್ದರು.
ಈ ಬೆಳವಣಿಗೆ ಬೆನ್ನಲ್ಲೇ ಹೋರಾಟಗಾರರು, ಜನಪ್ರತಿನಿಧಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಸಿಎಂ ಸಿದ್ದರಾಮಯ್ಯ ತಕ್ಷಣ ಫ್ಯಾಕ್ಟರಿ ಕಾಮಗಾರಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಕೊಪ್ಪಳ ಜನರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ