
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ದರೋಡೆ ಮಾಡಿದ್ದ ದರೋಡೆಕೋರನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜನವರಿ 27ರಂದು ಬೆಳಗಾವಿಯ ರಾಣಿ ಚನ್ನಮ್ಮ ನಗರದ ಎರಡನೇ ಕ್ರಾಸ್‌ನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ದರೋಡೆಕೋರ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ 3 ಲಕ್ಷ 50 ಸಾವಿರ ಮೌಲ್ಯದ 52 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಬೆಳಗಾವಿ ಶಾಸ್ತ್ರಿನಗರ ನಿವಾಸಿ ಸ್ವಾಗತ ಢಾಪಳೆಯನ್ನು ಉದ್ಯಮಭಾಗ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ದರೋಡೆಕೋರನಿಂದ 3 ಲಕ್ಷ 50 ಸಾವಿರ ಮೌಲ್ಯದ 52 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಹೀರೋ ಹೋಂಡಾ ಪ್ಯಾಶನ್ ಪ್ಲಸ್ ಬೈಕ್ ಜಪ್ತಿ ಮಾಡಲಾಗಿದೆ. ಇನ್ನು ಬಂಧಿಸಲ್ಪಟ್ಟ ಆರೋಪಿಯಿಂದ ಸ್ಥಳ ಮಹಜರು ಮಾಡಿಸಲಾಗಿದೆ. ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ