
ಪ್ರಗತಿವಾಹಿನಿ ಸುದ್ದಿ: ಐಜಿಪಿ ಡಿ.ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಿಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಡಿ.ರೂಪಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಜಿಪಿ ಡಿ.ರೂಪಾ ಕೆಳ ಹಂತದ ಅಧಿಕಾರಿಗಳನ್ನು ಬಳಸಿಕೊಂಡು ತಮ್ಮ ಕೊಠಡಿಯಲ್ಲಿನ ದಾಖಲೆಗಳ ಕಳುವು ಮಾಡಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ವರ್ತಿಕಾ ಕಟಿಯಾರ್ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ವರ್ತಿಕಾ ಕಟಿಯಾರ್ ಅವರನ್ನು ಸಿವಿಲ್ ಡಿಫೆನ್ಸ್ ಹಾಗೂ ಹೋಮ್ ಗಾರ್ಡ್ಸ್ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.
ಇದೀಗ ಐಜಿಪಿ ಡಿ.ರೂಪಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೇಷ್ಮೆ ಮಾರಾಟ ಮಂಡಳಿ ನಿಯಮಿತ ಎಂಡಿಯನ್ನಾಗಿ ನೇಮಕ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ