
ಪ್ರಗತಿವಾಹಿನಿ ಸುದ್ದಿ: ಕಿರುತೆರೆ ನಟಿ ವಿಸ್ಮಯಾ ಗೌಡ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಕೋರ್ಟ್ ಸೂಚನೆ ಮೇರೆಗೆ ನಟಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವಿಸ್ಮಯಾ ಗೌಡ 6.5 ಲಕ್ಷ ರೂಪಾಯಿ ಸಾಲ ಪಡೆದು ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು ಆರೋಪಿಸಿ ಹಿಮಾನ್ವಿ ಎಂಬುವವರು ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ನ್ಯಾಯಾಲಯ ಪ್ರಕರಣ ದಾಖಲಿಸಲು ಸೂಚಿಸಿದೆ.
ಕೋರ್ಟ್ ನಿರ್ದೇಶನದ ಮೇರೆಗೆ ನಟಿ ವಿಸ್ಮಯಾ ಗೌಡ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ