
ಪ್ರಗತಿವಾಹಿನಿ ಸುದ್ದಿ: ಜಾರಿ ನಿರ್ದೇಶನಾಲಯ ಅಧಿಕಾರಿಗಳು ದೇಶಾದ್ಯಂತ ಎಸ್ ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಂಟು ಹೊಂದಿರುವ SDPI ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೇಶಾದ್ಯಂತ ಎಸ್ ಡಿಪಿ ಐ ಕಚೇರಿ ಮೇಲೆ ಇಡಿ ದಾಳಿ ನಡೆದಿದೆ.
ರಾಜ್ಯ ರಾಜಧಾನಿ ಬೆಂಗಳೂರು, ರಾಷ್ಟ್ರ ರಾಜಧಾನಿ ದೆಹಲಿ, ಮಹಾರಾಷ್ಟ್ರ, ಮುಂಬೈ, ಥಾಣೆ, ಕೇರಳ, ಆಂಧ್ರಪ್ರದೇಶ ,ಜಾರ್ಖಂಡ್, ಪುಣೆ, ಚೆನ್ನೈ, ಕೋಲ್ಕತ್ತಾ, ಲಖನೌ, ಜೈಪುರ ಸೇರಿದಂತೆ ವಿವಿಧ ರಾಜ್ಯಗಳ ಪ್ರಮುಖ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ