
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :
93 ವರ್ಷಗಳ ಇತಿಹಾಸವಿರುವ ರಾಜ್ಯದ ಅತಿ ದೊಡ್ಡ ಪತ್ರಕರ್ತರ ಸಂಘಟನೆ ಆಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೊಪ್ಪಳ ಜಿಲ್ಲಾ ಘಟಕದ ಸಹಯೋಗದಲ್ಲಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯ ಸಹಕಾರದಲ್ಲಿ ತಿರುಳುಗನ್ನಡ ನಾಡು ಎಂದೇ ಖ್ಯಾತಿಯಾಗಿರುವ ಕೊಪ್ಪಳದಲ್ಲಿ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯನಿರತರಾಗಿರುವ ವೃತ್ತಿಬಾಂಧವರಿಗೆ ಗೌರವ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದು ವಿವಿಧ ದತ್ತಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುವುದು ಎಂದರು.
ಕೊಪ್ಪಳ ನಗರದ ಕಟಾರೆ ಕಲ್ಯಾಣ ಮಂಟಪದಲ್ಲಿ ಇದೆ ದಿ .9 ರಂದು ಭಾನುವಾರ ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸಾನಿಧ್ಯವನ್ನು ವಹಿಸಲಿದ್ದಾರೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.
ಹಿರಿಯರ ನೆನಪಿನಂಗಳದಲ್ಲಿ ಪುಸ್ತಕ ಬಿಡುಗಡೆಯನ್ನು ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ನೆರವೇರಿಸುತ್ತಾರೆ. ಅಭಿನಂದನಾ ನುಡಿಗಳನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ನುಡಿಯಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷ ಶಿವಾನಂದ ವಹಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಹನುಮಂತ ಹಳ್ಳಿಕೇರಿ ಜಿಲ್ಲಾಧ್ಯಕ್ಷರು ಕೊಪ್ಪಳ ಜಿಲ್ಲಾ ಘಟಕ ಇವರು ಮೊದಲ ನುಡಿಗಳನ್ನು ಆಡಲಿದ್ದಾರೆ. ಜೊತೆಗೆ ಪುಸ್ತಕದ ಕುರಿತು ಮಾಧ್ಯಮ ತಜ್ಞ ಬಹುರೂಪಿ ಬುಕ್ ಹೌಸ್ನ ಜಿ.ಎನ್. ಮೋಹನ್ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ, ನಗರಸಭೆ ಅಧ್ಯಕ್ಷ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನತರಾಗಿ ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ರತ್ನಮ್ ಪಾಂಡೆ, ಹಾಗೂ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರ್ಸಿದ್ಧಿ ಭಾಗವಹಿಸಲಿದ್ದಾರೆ. ಜೊತೆಗೆ ರಾಜ್ಯ ಸಮಿತಿ ಸದಸ್ಯ ಎಂ ಸಾಧಿಕಲಿ, ವಿಶೇಷ ಆಹ್ವಾನಿತ ಸದಸ್ಯ ಎಚ್ಎಸ್ ಹರೀಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ನಾಗರಾಜ್ ವೈ ಉಪಸ್ಥಿತರಿರಲಿದ್ದಾರೆ.
ಇದೇ ಸಂದರ್ಭದಲ್ಲಿ 2024ನೇ ಸಾಲಿನ ಕೆ ಡಬ್ಲ್ಯೂ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುವುದು ಜೊತೆಗೆ ವಿಶೇಷ ಪ್ರಶಸ್ತಿಗಳನ್ನು ಸಹ ಪ್ರಧಾನ ಮಾಡಲಾಗುವುದು ಎಂದು ಶಿವಾನಂದ ತಗಡೂರು ಹೇಳಿದರು.
ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಘಟಕದ ಪದಾಧಿಕಾರಿಗಳಾದ ವೈ.ಎಸ್.ಎಲ್.ಸ್ವಾಮಿ, ಸೋಮಶೇಖರ ಗಾಂಧಿ, ರಮೇಶ್ ಪಾಳ್ಯ, ಧ್ಯಾನ್ ಪೂಣಚ್ಚ, ಗಿರೀಶ್, ಜುಕ್ರಿಯ ಮತ್ತಿತರರು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ