

ಪ್ರಗತಿವಾಹಿನಿ ಸುದ್ದಿ: ಪಿಇಎಸ್ ಶಿಕ್ಷಣ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ, ಶಿಕ್ಷಣ ತಜ್ಞ ಪ್ರೊ. ಎಂ.ಆರ್ ದೊರೆಸ್ವಾಮಿ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ಪ್ರೊ. ಎಂ.ಆರ್ ದೊರೆಸ್ವಾಮಿ ಅವರ ಬೆಂಗಳೂರಿನ ಬನಶಂಕರಿ ನಿವಾಸಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತೆರಳಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮೃತರ ಪುತ್ರ ಪ್ರೊ. ಜವಾಹರ್ ಸೇರಿದಂತೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಶಾಸಕ ಕೃಷ್ಣಪ್ಪ ಮತ್ತಿತರರು ಇದ್ದರು.
ಪ್ರೊ.ದೊರೆಸ್ವಾಮಿ ನಿಧನಕ್ಕೆ ಸಚಿವ ಪ್ರಲ್ಹಾದ ಜೋಶಿ ಸಂತಾಪ; ಅಂತಿಮ ನಮನ ಸಲ್ಲಿಕೆ

ಬೆಂಗಳೂರು: ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ, ಮಾಜಿ ಎಂಎಲ್‌ಸಿ ಪ್ರೊ.ಎಂ.ಆರ್. ದೊರೆಸ್ವಾಮಿ ಅವರ ನಿಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ರಾತ್ರಿ ಡಾ.ದೊರೆಸ್ವಾಮಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪ ನಮನ ಸಲ್ಲಿಸಿದರು. ಅಲ್ಲದೇ, ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.
ದೊರೆಸ್ವಾಮಿ ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ್ದಲ್ಲದೆ, ಸಮಾಜ ಸೇವೆಯಲ್ಲೂ ತೊಡಗಿ ಸಾರ್ಥಕ್ಯ ಜೀವನ ನಡೆಸಿದವರೆಂದು ಜೋಶಿ ಸ್ಮರಿಸಿದರು.
ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ, ರಾಜ್ಯ ಸರ್ಕಾರದ ಶೈಕ್ಷಣಿಕ ಸುಧಾರಣೆಗಳ ಸಲಹೆಗಾರರಾಗಿದ್ದ, ಮಾಜಿ ಎಂಎಲ್‌ಸಿಯೂ ಆಗಿದ್ದ ಪ್ರೊ.ಎಂ.ಆರ್. ದೊರೆಸ್ವಾಮಿ ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಚಿವ ಜೋಶಿ ವಿಷಾದ ವ್ಯಕ್ತಪಡಿಸಿದರು. ದೊರೆಸ್ವಾಮಿ ಅವರ ಕುಟುಂಬಕ್ಕೆ ಮತ್ತು ಶಿಷ್ಯ ವೃಂದಕ್ಕೆ ಭಗವಂತ ದುಃಖ ಸಹಿಸಿಕೊಳ್ಳುವ ಶಕ್ತಿ ಭರಿಸಲಿ ಎಂದು ಪ್ರಾರ್ಥಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ