
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ವಯಂ ಪ್ರೇರಿತ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ. ಸಮೀರ್ ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊರಿಸಲಾಗಿತ್ತು. ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿಗಳ ಬಗ್ಗೆ ಧಾರ್ಮಿಕ ಭಾವನೆ ಹೊಂದಿದ ಸಾರ್ವಜನಿಕರ ಭಾವನೆಗೆ ಧಕ್ಕೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ಹೈಕೋರ್ಟ್ ಇದನ್ನು ತಳ್ಳಿ ಹಾಕಿದೆ. ಈ ಪ್ರಕರಣದಲ್ಲಿ ಸಮೀರ್ ಅವರಿಗೆ ಹೈಕೋರ್ಟ್ ನಿಂದ ದೊಡ್ಡ ಬಿಗ್ ರಿಲೀಫ್ ಸಿಕ್ಕಿದೆ. ಅವರನ್ನು ಬಂಧಿಸುವಂತಿಲ್ಲ ಹಾಗೂ ಪೊಲೀಸ್ ಠಾಣೆಗೆ ಕರೆಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಜೊತೆಗೆ, ಕಾನೂನು ಉಲ್ಲಂಘಿಸಿ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಈ ಮಾಹಿತಿಯನ್ನು ಮಾಜಿ ಐಪಿಎಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ