Karnataka News

*Karnataka Budget 2025-26: ರಾಜ್ಯ ಬಜೆಟ್ ಪ್ರಮುಖಾಂಶಗಳು:*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ, ಖಾದರ್ ಅನುಮತಿ ಕೇಳಿ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಆಯವ್ಯಯ ಎಂಬುದು ಕೂಡಿ ಕಳೆಯುವ ಲೆಕ್ಕವೆಲ್ಲ. ರಾಜ್ಯದ 7 ಕೋಟಿ ಜನರ ಉಸಿರು ಎಂಬ ಹೊಣೆಗಾರಿಕೆಯೊಂದಿಗೆ ಬಜೆಟ್ ಮಂಡಿಸಿಸುತ್ತೇದೆ ಎಂದು ಹೇಳಿದರು.

ರಾಜ್ಯದ ಪ್ರತಿ ಪ್ರಜೆಯ ಕನಸನ್ನು ಸಾಕಾರಗೊಳಿಸುವ, ನಾಳೆಯ ಬದುಕನ್ನು ಸದೃಢಗೊಳಿಸುವ ಹಾಗೂ ನುಡಿದಂತೆ ನಡೆಯುವ ಆಶಯದೊಂದಿಗೆ ಪ್ರಸ್ತಕ್ತ ಸಾಲಿನ ಬಜೆಟ್ ಮಂಡಿಸುತ್ತೇನೆ ಎಂದರು.

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದು, ನಿರೀಕ್ಷೆಗಳು ಸಾಕಷ್ಟಿದೆ. ಬಜೆಟ್ ಮೌಲ್ಯ 4 ಲಕ್ಷ ಕೋಟಿ ರೂಪಾಯಿ ದಾಟುವ ಸಾಧ್ಯತೆ ಇದೆ.

Home add -Advt

ಮುಮುಸ್ಲಿಂ ಮತ್ತು 2A ಹಾಗೂ 2B ವರ್ಗದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಘೋಷಿಸಲಾಗಿದೆ.

· ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ ರೂ.
· ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು.
· ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಮೀರಿದ ಇಂಜಿನ್‌ ಬದಲಾವಣೆಗೆ ಗರಿಷ್ಠ ಒಂದು ಲಕ್ಷ ರೂ. ಸಹಾಯಧನ.
· ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ “ಮಲ್ಟಿ ಲೆವಲ್‌ ಪಾರ್ಕಿಂಗ್‌” ವ್ಯವಸ್ಥೆ ನಿರ್ಮಾಣ
· ಆಳ ಸಮುದ್ರ ಮೀನುಗಾರಿಕೆ ಪ್ರೋತ್ಸಾಹಿಸಲು ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಸಲು ಕ್ರಮ
· ರಾಜ್ಯದಲ್ಲಿ ಹೊಸ ಮೀನುಗಾರಿಕಾ ನೀತಿ ಜಾರಿ
ಸಹಕಾರ
· 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಣೆ ಗುರಿ.
· 3ಸಾವಿರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಸಂಪೂರ್ಣ ಗಣಕೀಕರಣಕ್ಕೆ ಕ್ರಮ.
· ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ರಾಜ್ಯ ಸರ್ಕಾರದ ವತಿಯಿಂದ ಕ್ವಿಂಟಾಲ್‌ಗೆ 450 ರೂ. ಗಳಂತೆ ಒಟ್ಟು 138 ಕೋಟಿ ರೂ. ಹೆಚ್ಚುವರಿ ಪ್ರೋತ್ಸಾಹಧನ
· ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು 47 ಕೋಟಿ ರೂ. ಅನುದಾನ.
· ಎಪಿಎಂಸಿಗಳಲ್ಲಿನ ಪರವಾನಿಗೆ ಹೊಂದಿದ ಶ್ರಮಿಕರ ಮರಣಾನಂತರದ ವಿಮಾ ಪರಿಹಾರ ಮೊತ್ತ ಐದು ಲಕ್ಷ ರೂ.ಗಳಿಗೆ ಹೆಚ್ಚಳ.
· ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಸ್ಥಾಪನೆ.
· ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿಕುರಿ ಮತ್ತು ಮೇಕೆ ಮಾರುಕಟ್ಟೆ ಸ್ಥಾಪನೆ.
· ಕಲಬುರಗಿಯಲ್ಲಿ ನೂತನ ಮೆಗಾ ಡೈರಿ ಪ್ರಾರಂಭಿಸಲು 50 ಕೋಟಿ ರೂ. ಅನುದಾನ ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ಸಹಕಾರ ಭವನ ನಿರ್ಮಾಣ.
· ಕಲ್ಯಾಣ ಕರ್ನಾಟಕದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಉಗ್ರಾಣಗಳ ನಿರ್ಮಾಣ.
ಜಲಸಂಪನ್ಮೂಲ
· ಎತ್ತಿನಹೊಳೆ ಯೋಜನೆ ಅಡಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಕಾಲುವೆಯ ಸರಪಳಿ:241 ಕಿ.ಮೀ ವರೆಗೆ ಹರಿಸಲು ಕ್ರಮ.
· ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರದಿಂದಲೇ ಅಗತ್ಯ ಅನುದಾನ; 2,611 ಕೋಟಿ ರೂ. ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಯಡಿ 30 ಕೆರೆ ತುಂಬಿಸಿ 1.77 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಸೃಜನೆ.
· ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರಡಿ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿ ಪರಿಹಾರ ವಿತರಣೆಗೆ ಕ್ರಮ.
· ಮೇಕೆದಾಟು ಸಮತೋಲನ ಜಲಾಶಯ ಯೋಜನೆಯಡಿ ಮುಳುಗಡೆ ಜಮೀನುಗಳ ಸರ್ವೆ ಕಾರ್ಯ ಪೂರ್ಣ.
· ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ ಕೇಂದ್ರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಪ್ರಾರಂಭ.
· ಕೃಷ್ಣಾ, ಕಾವೇರಿ ಮತ್ತು ಇತರ ನದಿಗಳ ಕಣಿವೆಯಡಿ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಲು ಕ್ರಮ.
· ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡ ಅನುಷ್ಠಾನ.
· ತುಂಗಭದ್ರಾ ಜಲಾಶಯದಲ್ಲಿ ಹೂಳಿನಿಂದಾಗಿ ನೀರು ಸಂಗ್ರಹದಲ್ಲಿ ಆಗಿರುವ ಕೊರತೆ ಸರಿದೂಗಿಸಲು ಪರ್ಯಾಯ ಕ್ರಮಗಳ ಪರಿಶೀಲನೆ.
ಸಣ್ಣ ನೀರಾವರಿ
· ಎತ್ತಿನಹೊಳೆ ಯೋಜನೆಯಡಿ ಮಧುಗಿರಿ ತಾಲ್ಲೂಕಿನ 45 ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆ ತುಂಬಿಸುವ ಯೋಜನೆ 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನ
· ವೃಷಭಾವತಿ ವ್ಯಾಲಿ ಮೊದಲನೇ ಹಂತದಲ್ಲಿ 70 ಕೆರೆ ತುಂಬಿಸುವ
1080 ಕೋಟಿ ಯೋಜನೆ, ಹೆಚ್‌.ಎನ್ ವ್ಯಾಲಿ 2ನೇ ಹಂತದ ಯೋಜನೆಯಡಿ 70 ಕೋಟಿ ರೂ. ಮೊತ್ತದಲ್ಲಿ 24 ಕೆರೆ ಹಾಗೂ 93.50 ಕೋಟಿ ರೂ. ಮೊತ್ತದಲ್ಲಿ ಬೆಂಗಳೂರು ಪೂರ್ವ ತಾಲ್ಲೂಕಿನ 18 ಕೆರೆ ತುಂಬಿಸುವ ಯೋಜನೆ ಹಾಗೂ ಇತರೆ ಮುಂದುವರೆದ ಯೋಜನೆಗಳ ಪೂರ್ಣಗೊಳಿಸಲು ಕ್ರಮ.
· 2025-26 ರಲ್ಲಿ 2ಸಾವಿರ ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳ ಪ್ರಾರಂಭ.
ಶಾಲಾ ಶಿಕ್ಷಣ
· ಎಡಿಬಿ ನೆರವಿನಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆ ಪ್ರಾರಂಭಿಸಲು ಕ್ರಮ.
· ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಯೋಜನೆ 5ಸಾವಿರ ಶಾಲೆಗಳಿಗೆ ವಿಸ್ತರಣೆ.
· ಪ್ರಾಥಮಿಕ ಹಂತದಿಂದ ಪಿಯು ಹಂತದವರೆಗಿನ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ನೀಡುತ್ತಿರುವ ಮಾಸಿಕ ಗೌರವಧನ ತಲಾ 2ಸಾವಿರ ರೂ. ಹೆಚ್ಚಳ.
· ಬಿಸಿಯೂಟ ತಯಾರಿಕೆ ಸಿಬ್ಬಂದಿ ಗೌರವಧನ 1ಸಾವಿರ ರೂ. ಹೆಚ್ಚಳ.
· ರಾಜ್ಯದ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ 50 ಪ್ರೌಢಶಾಲೆಗಳ ಉನ್ನತೀಕರಣಕ್ಕೆ ಕ್ರಮ.
· ʻನಿರಂತರʼ ಕಾರ್ಯಕ್ರಮದಡಿ ಮಕ್ಕಳ ಹಾಜರಾತಿಯನ್ನು ಖಚಿತಪಡಿಸಲು Face Recognition ತಂತ್ರಜ್ಞಾನದ ಅಳವಡಿಕೆ.
· ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು 4ಸಾವಿರ ಶಾಲೆಗಳಲ್ಲಿ ದ್ವಿಭಾಷಾ ವಿಭಾಗ ಪ್ರಾರಂಭ.
· ರಾಜ್ಯದ 500 ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್‌ ಮತ್ತು ವಿಜ್ಞಾನ ಪ್ರಯೋಗಾಲಯ ಸೌಲಭ್ಯ ವಿಸ್ತರಣೆ.
· 7,500 ಶಾಲಾ-ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಐಟಿಐಗಳಲ್ಲಿ ತರಬೇತಿ.
· ಶಾಲೆ-ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725 ಕೋಟಿ ರೂ. ಹಾಗೂ ಪೀಠೋಪಕರಣ ಒದಗಿಸಲು 50 ಕೋಟಿ ರೂ. ಬಿಡುಗಡೆ.
· ಮಧ್ಯಾಹ್ನ ಉಪಹಾರ ಯೋಜನೆಯಡಿ 16,347 ಶಾಲೆಗಳ ಅಡುಗೆಮನೆ ನವೀಕರಣ ಹಾಗೂ ಪಾತ್ರೆ ಪರಿಕರ ಪೂರೈಕೆಗೆ 46 ಕೋಟಿ ರೂ.
· ಅಕ್ಷರ ಆವಿಷ್ಕಾರ ಯೋಜನೆ ಅಡಿ 200 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್.‌ ಶಾಲೆಗಳನ್ನಾಗಿ ಕಲ್ಯಾಣ ಕರ್ನಾಟಕ ಭಾಗದ 50 ಶಾಲೆಗಳ ಉನ್ನತೀಕರಣ.
· ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ. ಇಲಾಖೆಯಲ್ಲಿರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಇನ್ನೂ
5ಸಾವಿರ ಹುದ್ದೆ ಭರ್ತಿಗೆ ಕ್ರಮ.
ಉನ್ನತ ಶಿಕ್ಷಣ
· ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್‌ ನೆರವಿನ 2500 ಕೋಟಿ ರೂ. ವೆಚ್ಚದ ಯೋಜನೆ ಜಾರಿ.
· ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ|| ಮನಮೋಹನ್‌ ಸಿಂಗ್‌ ಬೆಂಗಳೂರು ನಗರಕೇಂದ್ರ ವಿಶ್ವವಿದ್ಯಾಲಯ ಎಂದು ಮರುನಾಮಕರಣ.
· 26 ಸರ್ಕಾರಿ ಮಹಿಳಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಹಾಗೂ ಪದವಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ 301 ಕೋಟಿ ರೂ. ಅನುದಾನ. ಹೊಸದಾಗಿ ಪ್ರಾರಂಭಿಸಿದ ಪಾಲಿಟೆಕ್ನಿಕ್‌, ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ನೆರವು.
· ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಕ
· 30 ಕೋಟಿ ರೂ. ವೆಚ್ಚದಲ್ಲಿ UUCMS ತಂತ್ರಾಂಶ ಉನ್ನತೀಕರಣ
· ಚಿಂತಾಮಣಿ ತಾಲ್ಲೂಕಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆ.
· 10 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ 23ಸಾವಿರ ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ
· ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBHI) ಯೋಜನೆ ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಣೆ; 20 ಕೋಟಿ ರೂ. ಅನುದಾನ.
· ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆರೈಕೆ ಕೇಂದ್ರಗಳ ಸ್ಥಾಪನೆ.
· ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣ ಇಳಿಸಲು 320 ಕೋಟಿ ರೂ. ಅನುದಾನ.
· ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು:
i) ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣ;
ii) ಹೊಸದಾಗಿ ಘೋಷಣೆಯಾಗಿರುವ 10ತಾಲ್ಲೂಕುಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ
iii) 8 ತಾಲ್ಲೂಕು ಆಸ್ಪತ್ರೆ ಹಾಗೂ 2 ಜಿಲ್ಲಾ ಆಸ್ಪತ್ರೆಗಳ ನವೀಕರಣಕ್ಕೆ 650 ಕೋಟಿ ರೂ.,
iv) ಪುತ್ತೂರು ತಾಲ್ಲೂಕು ಆಸ್ಪತ್ರೆ ಉನ್ನತೀಕರಣ; ಮೊಳಕಾಲ್ಮೂರು ಮತ್ತು ವಿರಾಜಪೇಟೆಯಲ್ಲಿ 200 ಹಾಗೂ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪನೆ,
v) 183 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳ ದುರಸ್ತಿ ಹಾಗೂ ನವೀಕರಣಕ್ಕೆ ಕ್ರಮ.
· ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಯೋಜನೆಗಳ ಜಾರಿ.
· ಸರ್ಕಾರದ ಗುತ್ತಿಗೆ/ಹೊರಗುತ್ತಿಗೆ/ಗೌರವಧನ ಆಧಾರದಲ್ಲಿ ಕಾರ್ಯನಿರ್ವಹಿಸುವ 3ಲಕ್ಷಕ್ಕೂ ಅಧಿಕ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ.
· ಕಲ್ಯಾಣ ಕರ್ನಾಟಕ ಮತ್ತು ಗಣಿ ಬಾಧಿತ ಪ್ರದೇಶದಲ್ಲಿ ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆ ಪತ್ತೆ ಹಾಗೂ ಗರ್ಭಕಂಠದ ಕ್ಯಾನ್ಸರ್‌ ತಡೆಯಲು 19 ಕೋಟಿ ರೂ.
· 100 ಕೋಟಿ ರೂ. ವೆಚ್ಚದಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ ನೀಡುವ ʻಗೃಹ ಆರೋಗ್ಯʼ ಯೋಜನೆ ರಾಜ್ಯಾದ್ಯಂತ ವಿಸ್ತರಣೆ.
· ʻಆರೋಗ್ಯ ಕವಚʼ ಸೇವೆ ಬಲಪಡಿಸಲು ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೊಳಪಡಿಸಲು ಕ್ರಮ.
· ಸಾಂಕ್ರಾಮಿಕ ರೋಗಗಳಾದ ಚಿಕೂನ್‌ಗುನ್ಯ, ಡೆಂಗ್ಯೂ ಹಾಗೂ ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕ್ಯಾಸನೂರು ಖಾಯಿಲೆ (KFD) ಮುಂಜಾಗ್ರತಾ ನಿಯಂತ್ರಣ ಕ್ರಮಗಳಿಗೆ 50 ಕೋಟಿ ರೂ.
· “ಶ್ರವಣ ಸಂಜೀವಿನಿ” ಯೋಜನೆಯಡಿ ಕಾಕ್ಲಿಯರ್‌ ಇಂಪ್ಲಾಂಟ್‌ ಶಸ್ತ್ರಚಿಕಿತ್ಸೆ ಹಾಗೂ ಇಂಪ್ಲಾಂಟ್‌ಗಳ ಬಿಡಿಭಾಗಗಳ ನಿರ್ವಹಣೆಗೆ 12 ಕೋಟಿ ರೂ.
· ಆಶಾ ಕಾರ್ಯಕರ್ತೆಯರ ತಂಡಾಧಾರಿತ ಗೌರವಧನ ಸಾವಿರ ರೂ. ಹೆಚ್ಚಳ.
· ಸುಟ್ಟಗಾಯಗಳ ತಡೆಗಟ್ಟುವಿಕೆ ಮತ್ತು ಸಂತ್ರಸ್ತ ಮಹಿಳೆಯರ ಚಿಕಿತ್ಸೆಗಾಗಿ ರಾಜ್ಯ ನೀತಿ ಜಾರಿ.
ವೈದ್ಯಕೀಯ ಶಿಕ್ಷಣ
· ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜು ಹಾಗೂ ಕೋಲಾರದಲ್ಲಿ ಪಿಪಿಪಿ ಆಧಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ.
· ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲು ಕ್ರಮ.
· ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್‌ ಹೆಲ್ತ್‌ ಸೈನ್ಸ್‌ ಕೋರ್ಸ್‌ಗಳ ಪ್ರಾರಂಭ.
· ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್‌ ಕೇಂದ್ರ ಸ್ಥಾಪನೆ.
· ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ
100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ ಕೇಂದ್ರ ಪ್ರಾರಂಭ.
· ತಲಾ 100 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ಮಾದರಿಯ ಸಂಸ್ಥೆಗಳ ಸ್ಥಾಪನೆ.
· ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ.
· ರಾಯಚೂರಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ.
· ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ 6 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್‌ ಕಾಲೇಜು ಪ್ರಾರಂಭ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
· ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಗೌರವಧನ 750 ರೂ. ಹೆಚ್ಚಳ.
· ಸಕ್ಷಮ ಅಂಗನವಾಡಿ ಯೋಜನೆಯಡಿ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು 175 ಕೋಟಿ ರೂ. ನೆರವು.
· ಅಂಗನವಾಡಿ ಕಟ್ಟಡಗಳಿಗೆ ಸಿ.ಎ. ನಿವೇಶನ ಖರೀದಿಗಾಗಿ 10 ಕೋಟಿ ರೂ.
· ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ವಿಕಲಚೇತನರ ಸಮೀಕ್ಷೆ ನಡೆಸಲು ಕ್ರಮ.
· ಮೈಸೂರಿನ ದೃಷ್ಟಿದೋಷವುಳ್ಳ ಮಕ್ಕಳ ಸರ್ಕಾರಿ ವಸತಿಯುತ ಶಾಲೆ ಹಾಗೂ ಬೆಳಗಾವಿಯಲ್ಲಿರುವ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳ ಅಭಿವೃದ್ಧಿಗೆ 5 ಕೋಟಿ ರೂ.
· ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವವರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಪ್ರೋತ್ಸಾಹಧನ ಯೋಜನೆ ವಿಸ್ತರಣೆ.
· ವಿಶೇಷ ಪಾಲನಾ ಯೋಜನೆಯಡಿ ಹೆಚ್‌.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳಿಗೆ ನೀಡುವ ಮಾಸಿಕ ಧನಸಹಾಯ 2 ಸಾವಿರ ರೂ.ಗೆ ಹೆಚ್ಚಳ
· ರಾಜ್ಯ ಅನುದಾನದಡಿಯಲ್ಲಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆ ಮಾಸಿಕ 1,750 ರೂ.ಗಳಿಗೆ ಹೆಚ್ಚಳ.
· ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲು ಕ್ರಮ.
· ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,084 ಕೋಟಿ ರೂ. ಆಯವ್ಯಯ ಹಂಚಿಕೆ.
· ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 62,033 ಕೋಟಿ ರೂ. ಆಯವ್ಯಯ ಹಂಚಿಕೆ
ಸಮಾಜ ಕಲ್ಯಾಣ
· ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿ 2025-26ನೇ ಸಾಲಿನಲ್ಲಿ ಒಟ್ಟಾರೆ 42,018 ಕೋಟಿ ರೂ. ಅನುದಾನ ನಿಗದಿ. ಪರಿಶಿಷ್ಟ ಜಾತಿ ಉಪಯೋಜನೆಗೆ 29,992 ಕೋಟಿ ರೂ. ಹಾಗೂ ಬುಡಕಟ್ಟು ಉಪಯೋಜನೆಗೆ 12,026 ಕೋಟಿ ರೂ. ಆಯವ್ಯಯ ನಿಗದಿ.
· ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2A ಮತ್ತು 2B ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ ಪ್ರಸ್ತುತ ನೀಡಲಾಗುತ್ತಿರುವ ಮೀಸಲಾತಿ ಎರಡು ಕೋಟಿ ರೂ.ಗಳಿಗೆ ಹೆಚ್ಚಳ. 1 ಕೋಟಿ ರೂ. ವರೆಗಿನ ಸರಕು ಖರೀದಿ ಮತ್ತು ಸೇವೆಗಳನ್ನು ಪಡೆಯಲು ಸಹ ಈ ಮೀಸಲಾತಿ ಸೌಲಭ್ಯ ವಿಸ್ತರಣೆ.
· ಪ್ರಗತಿ ಕಾಲೋನಿ ಯೋಜನೆಯಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲು 222 ಕೋಟಿ ರೂ. ಅನುದಾನ.
· ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಒಟ್ಟು 31 ವಸತಿ ಶಾಲೆಗಳನ್ನು ಪಿ.ಯು ಕಾಲೇಜನ್ನಾಗಿ ಉನ್ನತೀಕರಣ.
· 26 ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಸತಿ ಶಾಲೆಗಳ ಪ್ರಾರಂಭ.
· ಒಟ್ಟು 61 ಕ್ರೈಸ್‌ ವಸತಿ ಶಾಲೆಗಳಿಗೆ 1,292 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹಾಗೂ 213 ಕೋಟಿ ರೂ. ವೆಚ್ಚದಲ್ಲಿ ಕ್ರೈಸ್‌ ವಸತಿ ಶಾಲೆಗಳಿಗೆ ಶೈಕ್ಷಣಿಕ ಮೂಲಸೌಕರ್ಯ.
· 34 ವಿದ್ಯಾರ್ಥಿನಿಲಯಗಳಿಗೆ 238 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ
· ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26 ನೇ ಸಾಲಿನಲ್ಲಿ 488 ಕೋಟಿ ರೂ. ಅನುದಾನ ನಿಗದಿ.
· ದೇಶದ ಪ್ರತಿಷ್ಠಿತ 100 ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಪ್ರೋತ್ಸಾಹಧನ.
· ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್‌ ಮತ್ತು ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಅದೇ ಹಾಸ್ಟೆಲಿನಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮಾಸಿಕ 3,500 ರೂ. ನೆರವು.
ಪರಿಶಿಷ್ಟ ವರ್ಗಗಳ ಕಲ್ಯಾಣ
· 78 ಬುಡಕಟ್ಟು ವಸತಿ ಶಾಲೆಗಳಲ್ಲಿ 7ನೇ ತರಗತಿ ಪ್ರಾರಂಭ. ಐದು ವಸತಿ ಶಾಲೆಗಳು 12ನೇ ತರಗತಿಯವರೆಗೆ ಮೇಲ್ದರ್ಜೆಗೆ.
· ಪರಿಶಿಷ್ಟ ಪಂಗಡದ 20 ಹೊಸ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯ ಪ್ರಾರಂಭ.
· ಲ್ಯಾಂಪ್ಸ್‌ (LAMPS) ಸಹಕಾರ ಸಂಘಗಳಿಗೆ ದುಡಿಯುವ ಬಂಡವಾಳ ರೂಪದಲ್ಲಿ ತಲಾ ಐದು ಲಕ್ಷ ರೂ. ಸಹಾಯಧನ
· ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಮೂಲಸೌಕರ್ಯ ವಂಚಿತ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ.
· ರಾಜ್ಯ ಸಿವಿಲ್‌ ಸೇವೆಗಳಲ್ಲಿ ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ 13 ಬುಡಕಟ್ಟು ಜನಾಂಗಗಳ ಅಭ್ಯರ್ಥಿಗಳ ವಿಶೇಷ ನೇರ ನೇಮಕಾತಿಗೆ ಕ್ರಮ
ಹಿಂದುಳಿದ ವರ್ಗಗಳ ಕಲ್ಯಾಣ
· ಹಿಂದುಳಿದ ವರ್ಗಗಳವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ.
· ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ
422 ಕೋಟಿ ರೂ. ಅನುದಾನ.
· ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
· ಹಿಂದುಳಿದ ವರ್ಗಗಳ ನಿಗಮಗಳ ಮೂಲಕ ನಿರುದ್ಯೋಗಿಗಳಿಗೆ ವಿದ್ಯುತ್‌ಚಾಲಿತ ನಾಲ್ಕು ಚಕ್ರಗಳ ವಾಹನದಲ್ಲಿ, ಆಹಾರ ಕಿಯೋಸ್ಕ್‌ಪ್ರಾರಂಭಿಸಲುತಲಾ 3 ಲಕ್ಷ ರೂ. ವರೆಗೆ ಸಹಾಯಧನ ಸೌಲಭ್ಯ.
· ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
· ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ವತಿಯಿಂದ ಸಂಗೊಳ್ಳಿ ಮತ್ತು ನಂದಗಡದಲ್ಲಿ 28 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ.
· ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ.
· ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ..
· ಹಿಂದುಳಿದ ವರ್ಗಗಳಿಗೆ ಸೇರಿದ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ.
· IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.
· ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ಸಮುದಾಯಗಳಿಗೆ ಪ್ರತಿ ಕೈಗಾರಿಕಾ ಪ್ರದೇಶದ ಹಂಚಿಕೆಯಲ್ಲಿ ಶೇ.20ರಷ್ಟು ಭೂಮಿ ಮೀಸಲು.
ಅಲ್ಪಸಂಖ್ಯಾತರ ಕಲ್ಯಾಣ
· ಪ್ರಸ್ತುತ 250 ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ.
· ಆಯ್ದ 100 ಉರ್ದು ಮಾಧ್ಯಮದ ಶಾಲೆಗಳನ್ನು ಮೌಲಾನಾ ಆಜಾದ್‌ ಪಬ್ಲಿಕ್‌ ಶಾಲೆಗಳನ್ನಾಗಿ ಉನ್ನತೀಕರಿಸಲು 100 ಕೋಟಿ ರೂ.
· ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಗಾಗಿ 1ಸಾವಿರ ಕೋಟಿ ರೂ. ಅನುದಾನ.
· ಮದರಸಾಗಳಲ್ಲಿನ ವಿದ್ಯಾರ್ಥಿಗಳುNIOS ಮೂಲಕ SSLC ಪರೀಕ್ಷೆ ಬರೆಯಲು ಸಿದ್ದತೆಗೆ ನೆರವು.
· ವಕ್ಪ್ ಸಂಸ್ಥೆ ಆಸ್ತಿಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ.
· ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು
2 ಕೋಟಿ ರೂ. ಅನುದಾನ.
· 169 ವಸತಿ ಶಾಲೆ/ಕಾಲೇಜುಗಳಲ್ಲಿವ್ಯಾಸಂಗ ಮಾಡುತ್ತಿರುವ 25ಸಾವಿರ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ.
· ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗೆ ಪ್ರತಿ ಜೋಡಿಗೆ 50ಸಾವಿರ ರೂ. ಸಹಾಯಧನ.
· ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ ಹಳೆಯ ಗ್ರಂಥಾಲಯ 1 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣ
· ಅಲ್ಪಸಂಖ್ಯಾತ ಮಹಿಳೆಯರಿಗಾಗಿ 16 ಹೊಸ ಮಹಿಳಾ ಕಾಲೇಜುಗಳ ಸ್ಥಾಪನೆ.
· ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ
· ಕ್ರಿಶ್ಚಿಯನ್‌ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ. ಅನುದಾನ.
· ಜೈನ ಅರ್ಚಕರು, ಸಿಖ್ಖ್‌ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್‌
ಇಮಾಮ್‌ಗಳ ಮಾಸಿಕ ಗೌರವಧನ 6ಸಾವಿರ ರೂ. ಗಳಿಗೆ ಹೆಚ್ಚಳ. ಸಿಖ್ಖ್‌ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳ ಮಾಸಿಕ ಗೌರವಧನ 5‌ ಸಾವಿರ ರೂ.ಗಳಿಗೆಹೆಚ್ಚಳ.
· ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ. 50 ಪ್ರವೇಶ ಶುಲ್ಕ ಮರುಪಾವತಿಗೆ ಕ್ರಮ.
· ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 30 ಲಕ್ಷ ರೂ.ಗಳಿಗೆ ಹೆಚ್ಚಳ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು
· ಅನ್ನಭಾಗ್ಯ ಯೋಜನೆಯಡಿ, ಸಹಾಯಧನದ ಬದಲಾಗಿ, 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಣೆ; 4.21 ಕೋಟಿ ಫಲಾನುಭವಿಗಳಿಗೆ ಅನುಕೂಲ.
· ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಧಾರಣೆಗೆ 5 ಕೋಟಿ ರೂ.
· 80 ವರ್ಷ ಮೇಲ್ಪಟ್ಟ ಹಿರಿಯವರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ʻಅನ್ನ ಸುವಿಧಾʼ ಯೋಜನೆ 75 ವಯಸ್ಸು ಮೇಲ್ಪಟ್ಟ ಹಿರಿಯ ನಾಗರಿಕರು ಇರುವ ಮನೆಗಳಿಗೂ ವಿಸ್ತರಣೆ.
· ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್‌ ಗೆ 45 ರೂ. ಗಳಿಗೆ ಹೆಚ್ಚಳ.
ವಸತಿ
· ರಾಜೀವ್‌ಗಾಂಧಿ ವಸತಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ AHP ಮನೆಗಳ ಫಲಾನುಭವಿಗಳಿಗೆ “Interest subvention” ಯೋಜನೆ ಜಾರಿ.
· ಕರ್ನಾಟಕ ಗೃಹ ಮಂಡಳಿಯಿಂದ ಸೂರ್ಯ ನಗರದ 4ನೇ ಹಂತದಲ್ಲಿ 16,140 ನಿವೇಶನಗಳ ಅಭಿವೃದ್ಧಿ ಹಾಗೂ ಹಂಚಿಕೆಗೆ ಕ್ರಮ.
· ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಯೋಜನೆಯಡಿ ಈಗಾಗಲೇ ಠೇವಣಿ ಪಾವತಿಸಿರುವ 12,153 ಫಲಾನುಭವಿಗಳಿಗೆ ವಂತಿಕೆಯ ಮೊತ್ತದಲ್ಲಿ ಒಂದು ಲಕ್ಷ ರೂ. ಕಡಿತ. ಸರ್ಕಾರದಿಂದ 121 ಕೋಟಿ ರೂ. ಭರಿಸಲು ಕ್ರಮ.
ಕಾರ್ಮಿಕ
· ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ 06ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳ ಸ್ಥಾಪನೆಗೆ 750 ಕೋಟಿ ರೂ. ವೆಚ್ಚ.
· ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ, ನೀಡುವ Ex-gratia ಮೊತ್ತ 1.5 ಲಕ್ಷ ರೂ.ಗೆಹೆಚ್ಚಳ ಮತ್ತು ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಅವಲಂಬಿತರಿಗೆ ನೀಡುವ ಪರಿಹಾರ ಮೊತ್ತ8 ಲಕ್ಷ ರೂ.ಗೆ ಹೆಚ್ಚಳ.
· ಆಯುಷ್ಮಾನ್‌ಭಾರತ್‌ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಮಂಡಳಿಯ ಫಲಾನುಭವಿಗಳು 5 ಲಕ್ಷ ರೂ.ಗಳ ಚಿಕಿತ್ಸೆ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಂಡಳಿಯಿಂದ ಹೆಚ್ಚುವರಿಯಾಗಿ ವೈದ್ಯಕೀಯ ವೆಚ್ಚ ಮರುಪಾವತಿಗೆ ಕ್ರಮ.
· ರಾಜ್ಯ ವಿಮಾ ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು 51 ಕೋಟಿ ರೂ. ಅನುದಾನ.
ಕೌಶಲ್ಯಾಭಿವೃದ್ಧಿ
· ಯುವನಿಧಿ ಫಲಾನುಭವಿ ಯುವಕರಿಗೆ Industry Linkage Cell ಅಡಿ ಭವಿಷ್ಯ ಕೌಶಲ್ಯ ತರಬೇತಿ
· ರಾಜ್ಯದ ಯುವಕರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲುCMKKY-2.0 ಜಾರಿ.
· ರಾಜ್ಯದ ನರ್ಸಿಂಗ್‌ ವಿದ್ಯಾರ್ಥಿಗಳಿಗೆ CMKKY-2.0 ಯೋಜನೆಯಡಿ ಜರ್ಮನ್‌, ಇಟಾಲಿಯನ್‌, ಸ್ಪ್ಯಾನಿಷ್‌ ಮತ್ತು ಇತರೆ ವಿದೇಶೀ ಭಾಷಾ ಕೌಶಲ್ಯ ತರಬೇತಿ.
· ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ಆಯೋಜಿಸಲು ಕ್ರಮ.
· ಬೆಂಗಳೂರು, ಕಲಬುರಗಿ, ಮಂಗಳೂರು, ಮತ್ತು ಬೆಳಗಾವಿ ಕೆಜಿಟಿಟಿಐ ಕೇಂದ್ರಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ Industry-4.0ಗೆ ಅನುಗುಣವಾಗಿ ಹೊಸ ಪ್ರಯೋಗಾಲಯ ಸ್ಥಾಪನೆ.
· ʻನನ್ನ ವೃತ್ತಿ, ನನ್ನ ಆಯ್ಕೆʼ ಕಾರ್ಯಕ್ರಮದಡಿಸರ್ಕಾರಿ ಶಾಲಾ/ಕಾಲೇಜುಗಳಲ್ಲಿ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿಮಾರ್ಗದರ್ಶನ
· ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ India Skills-2026 ಸ್ಪರ್ಧೆ
· 2 ಸಾವಿರಅಭ್ಯರ್ಥಿಗಳಿಗೆ ಅಳಿವಿನಂಚಿನಲ್ಲಿರುವಪಾರಂಪರಿಕ ಮತ್ತು ಪ್ರಾದೇಶಿಕಕೌಶಲ್ಯಗಳ ಅಲ್ಪಾವಧಿ ತರಬೇತಿ ನೀಡಲು ಕ್ರಮ.
· ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸಲು ರಾಜ್ಯಮಟ್ಟದಲ್ಲಿ ʻಅಕ್ಕ ಕೋ-ಆಪರೇಟಿವ್ʼ ಸೊಸೈಟಿ ಸ್ಥಾಪನೆ.
· ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶು ಪಾಲನೆಗಾಗಿ ʻವಾತ್ಸಲ್ಯ ಕೇಂದ್ರʼಗಳ ಸ್ಥಾಪನೆ.
· ರಾಜ್ಯದ 10 ನಗರಗಳಲ್ಲಿ ಪ್ರಾಯೋಗಿಕವಾಗಿ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆ
· ಪಿ.ಎಮ್‌. ಸ್ವ-ನಿಧಿ ಯೋಜನೆಯಡಿ ಸಾಲದ ಗರಿಷ್ಠ ಮಿತಿಯನ್ನು ತಲುಪಿರುವ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಣೆಗೆ ಪಡೆಯುವ ಒಂದು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ. 8 ರಷ್ಟು ಬಡ್ಡಿ ಸಹಾಯಧನ ಸೌಲಭ್ಯ.
· 25 ಕೋಟಿ ರೂ. ವೆಚ್ಚದಲ್ಲಿ ಸೇಡಂ ಸರ್ಕಾರಿ ITI ಯನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಉನ್ನತೀಕರಣ.
· ಮಧುಗಿರಿ, ಇಂಡಿ, ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರು ತಾಲ್ಲೂಕುಗಳಲ್ಲಿ ನೂತನ GTTC ಸ್ಥಾಪನೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌
· ಗ್ರಾಮೀಣ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ ಪಡಿಸುವ 5200 ಕೋಟಿ ರೂ. ವೆಚ್ಚದ ಪ್ರಗತಿ ಪಥ ರಸ್ತೆ ಯೋಜನೆ ಪ್ರಸ್ತುತ ಸಾಲಿನಿಂದ ಅನುಷ್ಠಾನ.
· ಜಲ ಜೀವನ್‌ ಮಿಷನ್‌ ಯೋಜನೆಗೆ ಪ್ರಸ್ತುತ ಸಾಲಿನಲ್ಲಿ 6,050 ಕೋಟಿ ರೂ. ಅನುದಾನ.
· ʻಕಲ್ಯಾಣ ಪಥʼ ಯೋಜನೆಯಡಿ 1 ಸಾವಿರ ಕೋಟಿ ರೂ. ಮೊತ್ತದ 286 ಕಾಮಗಾರಿ ಶೀಘ್ರ ಪೂರ್ಣ.
· ಗ್ರಾಮ ಪಂಚಾಯತಿ ಮಟ್ಟದ ಅರಿವು ಕೇಂದ್ರಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಾಮರ್ಥ್ಯಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ.
· ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್‌ ಮೈಕ್ರೋ-ಗ್ರಿಡ್‌ಗಳ ಸ್ಥಾಪನೆ.
· ಗ್ರಾಮ ಪಂಚಾಯತಿಗಳಲ್ಲಿ “ಇ-ಸ್ವತ್ತು ಅಭಿಯಾನ” ಆರಂಭ. ಪಂಚತಂತ್ರ ತಂತ್ರಾಂಶ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೂ ವಿಸ್ತರಣೆ.ಹಿರಿಯ ಅಧಿಕಾರಿಗಳಿಂದ “ಗ್ರಾಮ ಪಂಚಾಯತಿ ದತ್ತು” ಕಾರ್ಯಕ್ರಮ ಆರಂಭ.
· ನೀರು ಸರಬರಾಜು ಮೂಲಭೂತ ಸೌಕರ್ಯ ನಿರ್ವಹಣೆಗೆ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶ ಅಭಿವೃದ್ಧಿ.
ಯೋಜನೆ
· ಪ್ರೊ. ಎಂ. ಗೋವಿಂದರಾವ್‌ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ ಆಧರಿಸಿ ಸೂಕ್ತ ಕ್ರಮ.
· ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಮೊತ್ತದ ಯೋಜನೆ
· ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ 83 ಕೋಟಿ ರೂ. ಅನುದಾನ.
· ಯೋಜನಾ ಇಲಾಖೆಯ ವ್ಯಾಪ್ತಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರ.
ನಗರಾಭಿವೃದ್ಧಿ
· ಬಿ.ಬಿ.ಎಂ.ಪಿ.ಯ ವತಿಯಿಂದ ಕೈಗೊಂಡಿರುವ ವಿವಿಧ ಸುಧಾರಣಾ ಕ್ರಮಗಳಿಂದಾಗಿ 4556 ರೂ.ಕೋಟಿಗಳ ಆದಾಯ ಗಳಿಕೆ. ಜಾಹೀರಾತು
ಉಪ-ವಿಧಿಗಳು 2025ರ ಅನುಷ್ಠಾನದಿಂದ ವಾರ್ಷಿಕ 750 ಕೋಟಿ ರೂ. ಆದಾಯವನ್ನು ನಿರೀಕ್ಷಿಸಲಾಗಿದೆ.
· 40000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸುರಂಗ ಮಾರ್ಗ (‌Tunnel)ಕಾರಿಡಾರ್‌ ನಿರ್ಮಾಣಕ್ಕೆ ಸರ್ಕಾರದಿಂದ ಬಿ.ಬಿ.ಎಂ.ಪಿಗೆ 19 ಸಾವಿರ ಕೋಟಿ ರೂ. ಗ್ಯಾರಂಟಿ ಒದಗಿಸಲಾಗುವುದು.
· ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 40.50 ಕಿ.ಮಿ. ಉದ್ದದ ಡಬಲ್‌ಡೆಕ್ಕರ್‌ ಮೇಲು ಸೇತುವೆಯನ್ನು 8916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
· “ಬ್ರ್ಯಾಂಡ್ ಬೆಂಗಳೂರು” ಯೋಜನೆಯಡಿ, 1,800 ಕೋಟಿ ರೂ. ಮೊತ್ತದ ೨೧ ಯೋಜನೆಗಳಿಗೆ ಅನುಮೋದನೆ. 413 ಕೋಟಿ ರೂ. ವೆಚ್ಚದಲ್ಲಿ “ಸಮಗ್ರ ಆರೋಗ್ಯ ಯೋಜನೆ” ಜಾರಿ.
· ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3ಸಾವಿರ ಕೋಟಿ ರೂ. ಆರ್ಥಿಕ ನೆರವು.
· ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಯಿಂದ 50 ಲಕ್ಷ ಜನರಿಗೆ ನೀರು ಪೂರೈಕೆ.
· ಕಾವೇರಿ ೬ನೇ ಹಂತ ಯೋಜನೆ ಅನುಷ್ಠಾನಗೊಳಿಸಲು ವಿಸ್ತೃತ ಯೋಜನಾ ವರದಿ ತಯಾರಿಕೆ
· BWSSB ವತಿಯಿಂದ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್‌ಗಳ ಉಪಯೋಗ ಪಡೆಯಲು PPP ಮಾದರಿಯಲ್ಲಿ ಯೋಜನೆ.
· ಬೆಂಗಳೂರು ಬಿಸ್‌ನೆಸ್‌ ಕಾರಿಡಾರ್‌ 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ
27 ಸಾವಿರ ಕೋಟಿ ರೂ. ಯೋಜನೆ.
· ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ.
ಪೌರಾಡಳಿತ
· ಮಹಾನಗರ ಪಾಲಿಕೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ದಿಗೆ UIDF ಮೂಲಕ 600 ಕೋಟಿ ರೂ. ಅನುದಾನ.
· ರಾಯಚೂರು, ಬೀದರ್‌ ಮತ್ತು ಹಾಸನ ನಗರಸಭೆಗಳು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ. ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆ.
· ನಗರೋತ್ಥಾನ 4ನೇ ಹಂತದಯೋಜನೆಗೆ ಪ್ರಸಕ್ತ ಸಾಲಿನಲ್ಲಿ 500 ಕೋಟಿ ರೂ. ಅನುದಾನ.
· ನಾಗರಿಕ ಸೇವೆಗಳ ಪಾವತಿ ಹಾಗೂ ತೆರಿಗೆಗಳನ್ನು onlinepayment ಮೂಲಕ ಸಂಗ್ರಹಿಸುವ ವ್ಯವಸ್ಥೆ ಅಭಿವೃದ್ಧಿ.
· ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ E-Officeವ್ಯವಸ್ಥೆ ಕಡ್ಡಾಯ.
· ರಾಮನಗರ ಮತ್ತು ಉಲ್ಲಾಳಕ್ಕೆ 705 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿ.
· ಅಮೃತ್‌.0 ಯೋಜನೆಯಡಿ 233 ಕುಡಿಯುವ ನೀರು ಯೋಜನೆ ಅನುಷ್ಠಾನ.
· 142 ಕೋಟಿ ರೂ. ವೆಚ್ಚದಲ್ಲಿ ಎಂಟು ಪಟ್ಟಣಗಳಲ್ಲಿ ಒಳಚರಂಡಿ ಯೋಜನೆ ಅನುಷ್ಟಾನ.
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ
· ವಿಜಯಪುರ ವಿಮಾನ ನಿಲ್ದಾಣ 2025-26 ಕಾರ್ಯಾರಂಭ.
· ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗಳಿಗೆ 53 ಕೋಟಿ ರೂ. ಅನುದಾನ ಬಿಡುಗಡೆ.
· ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ಭೂ ಸ್ವಾಧಿನ ಪ್ರಕ್ರಿಯೆ ಜಾರಿಯಲ್ಲಿದೆ
· ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ 319 ಕೋಟಿ ರೂ. ಅನುದಾನ ಬಿಡುಗಡೆ.
· 2025-26ನೇ ಸಾಲಿನಲ್ಲಿ, ರೈಲ್ವೇ ಯೋಜನೆಗಳಿಗೆ 600 ಕೋಟಿ ರೂ. ಮೀಸಲು.
· ರೈಲ್ವೆ ಮೇಲ್ಸೇತುವೆ/ಕೆಳಸೇತುವೆ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ.
· ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥೀಕರಣಕ್ಕೆ 406 ಕೋಟಿ ರೂ. ಅನುದಾನ.
· ಬೆಂಗಳೂರು ಉಪನಗರ ರೈಲ್ವೆ ಯೋಜನೆ 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
· ಜಲಸಾರಿಗೆ ಅಭಿವೃದ್ಧಿಗೆ ಪೂರಕವಾಗಿ ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂದರು ಅಭಿವೃದ್ದಿ ಮತ್ತು ಪ್ರವಾಸೋದ್ಯಮಕ್ಕೆ ಅನುಮೋದನೆ.
· ಕಡಲು ಕೊರೆತ ತಡೆಗಟ್ಟಲು ಶೋರ್‌ಲೈನ್ ಮ್ಯಾನೇಜ್‌ಮೆಂಟ್‌ ಪ್ಲಾನ್‌ ಪ್ರಕಾರ ಹಂತಹಂತವಾಗಿ ಕಾಮಗಾರಿ ಅನುಷ್ಠಾನ.
· ಮಂಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರ ಸ್ಥಾಪನೆ.
· ದೇವನಹಳ್ಳಿಯಲ್ಲಿ 407 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್‌ ಅಭಿವೃದ್ಧಿ.
ಲೋಕೋಪಯೋಗಿ
· 1,೮೫0 ಕಿ.ಮೀ. ರಾಜ್ಯ ಹೆದ್ದಾರಿ ಹಾಗೂ ೨,೫೭೦ ಕಿ.ಮೀ. ಜಿಲ್ಲಾ ರಸ್ತೆಗಳನ್ನು ರೂ. ೪,೮೪೮ ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಕ್ರಮ.
· ರಾಯಚೂರು ಹಾಗೂ ಬೈಲಹೊಂಗಲ ಪಟ್ಟಣದ ರಿಂಗ್‌ ರೋಡ್‌, ವಾಗ್ದಾರಿ-ರಿಬ್ಬನ್‌ಪಲ್ಲಿ ಮತ್ತು ಮದ್ದೂರು ರಸ್ತೆಯ ಅಗಲೀಕರಣದ ಕಾಮಗಾರಿಗಳ ವಿಸ್ತೃತ ಅಂದಾಜು ತಯಾರಿಕೆ.
· ದಕ್ಷಿಣ ಕನ್ನಡ, ವಿಜಯಪುರ, ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಟ್ಟು 6ಸೇತುವೆ ನಿರ್ಮಾಣಕ್ಕೆ ಅನುಮೋದನೆ.
· ಶಿಥಿಲಾವಸ್ಥೆಯಲ್ಲಿರುವ 39 ಸೇತುವೆಗಳ ದುರಸ್ತಿ ಹಾಗೂ ಪುನರ್‌ ನಿರ್ಮಾಣಕ್ಕೆ ಸಾವಿರ ಕೋಟಿ ರೂ. ಯೋಜನೆ.
· ಕೊಡಗು ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಹಾನಿಯಾಗಿರುವ ರಸ್ತೆ ಮತ್ತು ಸೇತುವೆಗಳ ಪುನರ್‌ ನಿರ್ಮಾಣ.
· ರಾಯಚೂರು-ಸಿಂಧನೂರು ರಸ್ತೆ ಅಭಿವೃದ್ಧಿಯ 1,696 ಕೋಟಿ ರೂ. ಮೊತ್ತದ ಕಾಮಗಾರಿ ಈ ವರ್ಷ ಪೂರ್ಣ.
· ದೇವನಹಳ್ಳಿಯಿಂದ ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 3,190 ಕೋಟಿ ರೂ. ಮೊತ್ತದ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿ ಚುರುಕು.
· SHDP ಹಂತ-5 ರಡಿ ಪ್ರಸಕ್ತ ಸಾಲಿನಲ್ಲಿ 1,317 ಕಿ.ಮೀ ಉದ್ದದ ರಸ್ತೆ ಪೂರ್ಣಗೊಳಿಸಲು ಕ್ರಮ.
· ಕೆಶಿಪ್‌-4 ಯೋಜನೆಯಡಿ 5,736 ಕೋಟಿ ರೂ. ವೆಚ್ಚದಲ್ಲಿ 875 ಕಿ.ಮೀ ಉದ್ದದ ೧೧ ರಸ್ತೆಗಳನ್ನು ಅಭಿವೃದ್ದಿಗೊಳಿಸಲು ಕ್ರಮ.
ಇಂಧನ
· “ಗೃಹ ಜ್ಯೋತಿ” ಯಡಿ ಇದುವರೆಗೆ 9657 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ 10,100 ಕೋಟಿ ರೂ. ಬಿಡುಗಡೆಗೆ ಕ್ರಮ.
· ನೀರಾವರಿ ಪಂಪ್‌ಸೆಟ್‌ ವಿದ್ಯುತ್‌ ಸರಬರಾಜಿಗೆ ಸಹಾಯಧನದಡಿ 33.84 ಲಕ್ಷ ಪಂಪ್‌ಸೆಟ್‌ಗಳಿಗೆ 16,021 ಕೋಟಿ ರೂ. ನೆರವು.
· ರಾಜ್ಯದ ಸ್ಥಾಪಿತ ಇಂಧನ ಸಾಮರ್ಥ್ಯವನ್ನು 32 ಗಿಗಾವ್ಯಾಟ್‌ ನಿಂದ 60 ಗಿಗಾವ್ಯಾಟ್‌ಗೆ ಹೆಚ್ಚಿಸಲು ಕ್ರಮ.
§ 800 ಮೆಗಾವ್ಯಾಟ್‌ ಸಾಮರ್ಥ್ಯದ ಗೋದ್ನಾ ಶಾಖೋತ್ಪನ್ನ ವಿದ್ಯುತ್‌ ಸ್ಥಾವರ ಕಾರ್ಯಗತಗೊಳಿಸಲು ನಿರ್ಧಾರ.
§ ಶರಾವತಿ ಪಂಪ್ಡ್ ಸ್ಟೋರೇಜ್ ಪವರ್ ಪ್ಲಾಂಟ್ ಅನುಷ್ಠಾನಕ್ಕಾಗಿ ಟೆಂಡರ್‌ ಪ್ರಕ್ರಿಯೆಗೆ ಚಾಲನೆ.
§ ಪಿಪಿಪಿ ಮಾದರಿಯಲ್ಲಿ 1,846 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಬ್ಯಾಟರಿ ಶಕ್ತಿ ಶೇಖರಣಾ ವ್ಯವಸ್ಥೆ.
§ ನೀರಾವರಿ ಪಂಪ್‌ಸೆಟ್‌ಗಳ ವಿಕೇಂದ್ರೀಕೃತ ಫೀಡರ್‌ ಸೌರೀಕರಣದಡಿ ಒಟ್ಟು 1,192 MW ಸಾಮರ್ಥ್ಯದ ಯೋಜನೆಗಳ ಅನುಷ್ಠಾನ.
§ ಸೋಲಾರ್‌ ಪಂಪ್‌ ಸೆಟ್‌ ಅಳವಡಿಸುವ ಯೋಜನೆಯಡಿ 40ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ, 752 ಕೋಟಿ ರೂ. ವೆಚ್ಚ.
· 8,833 ಕೋಟಿ ರೂ. ವೆಚ್ಚದಲ್ಲಿ 100 ಉಪಕೇಂದ್ರ ಸ್ಥಾಪನೆ.
· ಗಂಗಾ ಕಲ್ಯಾಣ ಯೋಜನೆಯಡಿ 25,971 ಕೊಳವೆ ಬಾವಿಗಳಹಾಗು 6,887 ಕುಡಿಯುವ ನೀರಿನ ಯೋಜನೆಗಳ ವಿದ್ಯುದೀಕರಣ, 1.94 ಲಕ್ಷ ವಿತರಣಾ ಪರಿವರ್ತಕಗಳ ಅಳವಡಿಕೆ.
· ಗ್ರಾಮ ಪಂಚಾಯತಿಗಳಲ್ಲಿ, 850 ಕೋಟಿ ರೂ. ವೆಚ್ಚದಲ್ಲಿ Phase wire ಅಳವಡಿಸುವ ಕಾಮಗಾರಿ ಅನುಷ್ಠಾನ.
· ನವೀಕರಿಸಬಹುದಾದ ಇಂಧನ ಸ್ಥಾವರಗಳ ಸ್ಥಾಪನೆಗೆ ಕೃಷಿ ಭೂಮಿಗೆ ಭೂ ಪರಿವರ್ತನೆ ಪ್ರಕ್ರಿಯೆಯಿಂದ ವಿನಾಯಿತಿ.
· ವಿದ್ಯುತ್ ಪ್ರಸರಣ ವಲಯದಲ್ಲಿ InvIT ಮಾದರಿಯಲ್ಲಿ 5ಸಾವಿರ ಕೋಟಿ ರೂ. ಹೂಡಿಕೆ ಸಂಗ್ರಹ ಗುರಿ.

ವಾಣಿಜ್ಯ ಮತ್ತು ಕೈಗಾರಿಕೆ
· ಕೈಗಾರಿಕೋದ್ಯಮಿಗಳ ಅನುಸರಣೆಯ ನಿಯಮಗಳು ಮತ್ತು ಷರತ್ತುಗಳ ಸರಳೀಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉದ್ಯೋಗದಾತ ನಂಬಿಕೆ ವಿಧೇಯಕ ಹಾಗೂ ಕರ್ನಾಟಕ ಉದ್ಯೋಗದಾತ ಅನುಸರಣೆ ಜಾಲಬಂಧ ಮಸೂದೆಗಳ ಜಾರಿಗೆ ಕ್ರಮ.
· ರಾಜ್ಯ ಸರ್ಕಾರವು Karnataka Clean Mobility Policy 2025-30 ಯಡಿ 50ಸಾವಿರ ಕೋಟಿ ರೂ. ಹೂಡಿಕೆ ಹಾಗೂ 1ಲಕ್ಷ ಹೊಸ ಉದ್ಯೋಗ ಸೃಜನೆಯ ಗುರಿ.
· ಬೆಂಗಳೂರು ವಲಯದಲ್ಲಿ E.V. ವಾಹನಗಳ ತಯಾರಿಕೆ ಹಾಗೂ ಬಳಕೆ ಉತ್ತೇಜನಕ್ಕಾಗಿ ೨೫ ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ E.V ಕ್ಲಸ್ಟರ್‌ ನಿರ್ಮಾಣ.
· 21911 ಕೋಟಿ ರೂ. ಹೂಡಿಕೆಯೊಂದಿಗೆ ಪ್ರಾರಂಭವಾದ Foxconn ಸಂಸ್ಥೆಗೆ ಮೊಬೈಲ್‌ ಫೋನ್ ಗಳ ಉತ್ಪಾದನಾ ಫಟಕಕ್ಕೆ 6970 ಕೋಟಿ ರೂ. ಮೌಲ್ಯದ ಪ್ರೋತ್ಸಾಹಕ ನೀಡಲು ಕ್ರಮ. ಇದರಿಂದ 50ಸಾವಿರ ಉದ್ಯೋಗ ಸೃಜನೆಯ ನಿರೀಕ್ಷೆ.
· ಉದ್ಯೋಗಸ್ಥ ಮಹಿಳೆಯರಿಗೆ ಕೋಲಾರ ಜಿಲ್ಲೆಯ ನರಸಾಪುರದಲ್ಲಿ ಹಾಗೂ ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು 193 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ವಸತಿ ನಿಲಯ ನಿರ್ಮಾಣ.
· ವಿಜಯಪುರದ ತಿಡಗುಂಡಿಯಲ್ಲಿPlug & Play ಸೌಲಭ್ಯವಿರುವ Flat Factory ಗಳ ಸ್ಥಾಪನೆಗೆ ಕ್ರಮ.
· ಕೋಲಾರ ಜಿಲ್ಲೆಯ ಶಿವಾರಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ Multi Sector Net Zero Sustainability Industrial Park ಅಭಿವೃದ್ಧಿ.(ಪಿ.ಪಿ.ಪಿ)
· ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್‌ಕಾರಿಡಾರ್‌ಯೋಜನೆಯಡಿ ತುಮಕೂರು ಕೈಗಾರಿಕಾ ನೋಡ್‌ನಲ್ಲಿ ಜಪಾನೀಸ್‌ಇಂಡಸ್ಟ್ರಿಯಲ್‌ಪಾರ್ಕ್‌ಸ್ಥಾಪನೆ.
· ಕರಕುಶಲಕರ್ಮಿಗಳಿಗೆ ಬಿದರಿ ಕಲಾಕೃತಿಗಳ ಹಾಗೂ ಶ್ರೀಗಂಧ ಕಲಾಕೃತಿಗಳ ಕಚ್ಚಾ ವಸ್ತುಗಳನ್ನು ರಿಯಾಯಿತಿ ದರದಲ್ಲಿ ನೀಡಲು ಒಂದು ಕೋಟಿ ರೂ. ಅನುದಾನ
· MSME ಘಟಕಗಳಿಗೆ ವಿವಿಧ ಪ್ರೋತ್ಸಾಹಕಗಳನ್ನು ನೀಡಲು 185 ಕೋಟಿ ರೂ. ಹಂಚಿಕೆ.
· MSME ವಲಯಕ್ಕೆ ಅಗತ್ಯವಾದ ಬೆಂಬಲವನ್ನು ಒದಗಿಸುವ ಉದ್ದೇಶದಿಂದ ಪ್ರತ್ಯೇಕ MSME ನೀತಿ ಜಾರಿ.
· ಜಿ.ಎಸ್.ಟಿ / ರಾಯಧನ ವಂಚನೆಯನ್ನು ತಡೆಯಲು ಸಣ್ಣ ಖನಿಜಗಳಿಗೆ
ಇ-ವೇ ಬಿಲ್.‌
· ಸಕ್ಕರೆ ಕಾರ್ಖಾನೆಗಳ ವ್ಯಾಪ್ತಿಯಲ್ಲಿನ ರಸ್ತೆಗಳ ಅಭಿವೃದ್ಧಿಗಾಗಿ 2025-26ನೇ ಸಾಲಿಗೆ 20 ಕೋಟಿ ರೂ. ಅನುದಾನ
· ನೇಕಾರಿಕೆ ಉದ್ದಿಮೆಯನ್ನು ಉತ್ತೇಜಿಸಲು “ನೇಕಾರರ ಪ್ಯಾಕೇಜ್‌-2.0” ಜಾರಿ.
· 90,645 ನೇಕಾರರಿಗೆ ಉಚಿತ ವಿದ್ಯುತ್‌ ಹಾಗೂ ರಿಯಾಯಿತಿ ವಿದ್ಯುತ್‌ ಸವಲತ್ತನ್ನು ಒದಗಿಸಲು 100 ಕೋಟಿ ರೂ. ಅನುದಾನ
· ನೂತನ “ಜವಳಿ ನೀತಿ 2025-30” ಜಾರಿ; ಎರಡು ಲಕ್ಷ ಉದ್ಯೋಗ ಸೃಜನೆಯ ಗುರಿ
· ಪಿಪಿಪಿ ಮಾದರಿಯಲ್ಲಿ ೫ ಜವಳಿ ಪಾರ್ಕ್‌ಅಭಿವೃದ್ಧಿ. PM-MITRA ಯೋಜನೆಯಡಿ ಕಲಬುರಗಿಯಲ್ಲಿ ಜವಳಿ ಪಾರ್ಕ್‌ಸ್ಥಾಪನೆ.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ
· ಹೊಸ ಐ.ಟಿ ನೀತಿ ಜಾರಿಗೆ ಕ್ರಮ. ಕ್ಲೌಡ್ ಕಂಪ್ಯೂಟಿಂಗ್ (Cloud Computing) ಅಭಿವೃದ್ಧಿಗೆ ಒತ್ತು. 2 ಮತ್ತು 3ನೇ ಹಂತದ ನಗರಗಳಿಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರ ವಿಸ್ತರಣೆಗೆ ಆದ್ಯತೆ.
· ಬೆಂಗಳೂರು ಹೊರತು ಪಡಿಸಿ, ಇತರ ನಗರಗಳಗಲ್ಲೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು, 1ಸಾವಿರ ಕೋಟಿ ರೂ. ವೆಚ್ಚದ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್‌ ಕಾರ್ಯಕ್ರಮ -LEAP ಪ್ರಾರಂಭ. ಈ ವರ್ಷ 200 ಕೋಟಿ ರೂ. ಅನುದಾನ. 5 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ.
· 50 ಕೋಟಿ ರೂ. ಹೂಡಿಕೆಯೊಂದಿಗೆ Centre for Applied AI for Tech Solutions (CATS) ಸ್ಥಾಪನೆ. ಈ ವರ್ಷ 7.5 ಕೋಟಿ ರೂ. ಅನುದಾನ.
· ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ
48 ಕೋಟಿ ರೂ. ವೆಚ್ಚದಲ್ಲಿ ಕ್ವಾಂಟಮ್ ರಿಸರ್ಚ್ ಪಾರ್ಕ್-ಹಂತ-2 ಸ್ಥಾಪನೆ.
· ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ 2024-2029, MSMEಮತ್ತು ದೊಡ್ಡ ಉದ್ಯಮ ವಿಭಾಗದಲ್ಲಿ 1,500 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ಗುರಿ. ಪ್ರೋತ್ಸಾಹಕಗಳಿಗಾಗಿ 220 ಕೋಟಿ ರೂ.
· ಕಲಬುರಗಿಯಲ್ಲಿ Plug and Play ಮಾದರಿಯಲ್ಲಿ Flat Floor Factory ಸ್ಥಾಪನೆ.
· ಬೆಂಕಿ ಅನಾಹುತದಲ್ಲಿ ತೀವ್ರ ಹಾನಿ ಸಂಭವಿಸಿದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್‌ನ ಪುನರ್‌ನಿರ್ಮಾಣಕ್ಕೆ ಒಟ್ಟು 57 ಕೋಟಿ ರೂ. ನೆರವು, ಈ ವರ್ಷ 20 ಕೋಟಿ ರೂ. ಅನುದಾನ
· ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಧಾರವಾಡದಲ್ಲಿ ಕಿಯೊನಿಕ್ಸ್‌ ಮೂಲಕ ಗ್ಲೋಬಲ್‌ ಇನ್ನೋವೇಶನ್‌ ಡಿಸ್ಟ್ರಿಕ್ಟ್‌ ಅಭಿವೃದ್ಧಿಗೆ ಕ್ರಮ.
· ಕೋಲಾರ, ರಾಮನಗರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೊಸ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಸ್ಥಾಪನೆ; 9 ಕೋಟಿ ರೂ. ಅನುದಾನ.
· ಮೈಸೂರಿನ 150 ಎಕರೆ ಪ್ರದೇಶದಲ್ಲಿ ಪಿಸಿಬಿ ಪಾರ್ಕ್ ಅಭಿವೃದ್ಧಿ.
· ಭಾರತ ಸರ್ಕಾರ ಮತ್ತು ಕೈಗಾರಿಕೆಗಳ ಸಹಭಾಗಿತ್ವದಲ್ಲಿ 99 ಕೋಟಿ ರೂ. ವೆಚ್ಚದಲ್ಲಿ ಸೆನ್ಸರ್‌ಟೆಕ್ ಇನ್ನೋವೇಶನ್ ಹಬ್ ಸ್ಥಾಪನೆ.
· ಕಿಯೋನಿಕ್ಸ್ ವತಿಯಿಂದ ಮಂಗಳೂರು, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಪ್ಲಗ್-ಅಂಡ್-ಪ್ಲೇ ಸೌಲಭ್ಯಗಳಾಗಿ ಮೂರು ಹೊಸ ಜಾಗತಿಕ ತಂತ್ರಜ್ಞಾನ ಕೇಂದ್ರ(GTC)ಗಳ ಸ್ಥಾಪನೆ.
· ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಏಕೀಕರಣಕ್ಕಾಗಿ ಕಲಬುರ್ಗಿಯಲ್ಲಿ ಅಗ್ರಿ-ಟೆಕ್‌ವೇಗವರ್ಧಕ ಸ್ಥಾಪನೆ.
ಕನ್ನಡ ಮತ್ತು ಸಂಸ್ಕೃತಿ
· ಬಾದಾಮಿಯಲ್ಲಿಚಾಲುಕ್ಯ ಉತ್ಸವದಲ್ಲಿ ನೃತ್ಯೋತ್ಸವ ಕಾರ್ಯಕ್ರಮ ಆಯೋಜನೆಗೆ 2 ಕೋಟಿ ರೂ. ಅನುದಾನ.
· ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಬೊಳುವಾರು ಮೊಹಮ್ಮದ್‌ ಕುಂಞಿ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿ ನಾಟಕಕ್ಕೆ ರೂಪಾಂತರಿಸಿ, ಪ್ರದರ್ಶಿಸಲು 1 ಕೋಟಿ ರೂ.
· ʻಕನ್ನಡ ಭಾರತಿʼ ಪುಸ್ತಕ ಮಾಲಿಕೆಯಡಿ ವಿವಿಧ ಕ್ಷೇತ್ರಗಳ ಸಾಧಕರನ್ನು ಪರಿಚಯಿಸುವ ಪುಸ್ತಕ ಪ್ರಕಟಣೆಗೆ ಕ್ರಮ.
· ದಾವಣಗೆರೆಯ ವೃತ್ತಿರಂಗಭೂಮಿ ರಂಗಾಯಣದಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ, ವೃತ್ತಿ ರಂಗಾಯಣ ಸಮುಚ್ಛಯ ಹಾಗೂ ಥಿಯೇಟರ್‌ ಮ್ಯೂಸಿಯಂ ನಿರ್ಮಾಣ.
· ಕಲಾವಿದರ ಮಾಸಾಶನ 2500 ರೂ. ಗಳಿಗೆ ಹೆಚ್ಚಳ.
· ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ 2,500 ಪ್ರಾಚೀನ ತಾಳೆಗರಿಯ ಹಸ್ತಪ್ರತಿಗಳ ಡಿಜಿಟಲೀಕರಣ ಯೋಜನೆ
· ಮೈಸೂರಿನ ರಂಗಾಯಣದ ಕಾರ್ಯಚಟುವಟಿಕೆಗಳಿಗೆ 2 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
· ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರಕ್ಕೆ ತತ್ವಪದ ಪಾರಿಭಾಷಿಕ ಪದಕೋಶದ ಸಿದ್ಧತೆ ಮತ್ತು ಪ್ರಕಟಣೆ ಕಾರ್ಯಕ್ಕಾಗಿ ಒಂದು ಕೋಟಿ ರೂ.
ಪ್ರವಾಸೋದ್ಯಮ
· ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು (Highway Hubs) ಉನ್ನತೀಕರಿಸಲು ಕ್ರಮ.
· ವಿಶೇಷ ಬಂಡವಾಳ ಯೋಜನೆಯಡಿ ಒಟ್ಟಾರೆ 199 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಹಾಗೂ ಬೆಂಗಳೂರಿನಲ್ಲಿರುವ ದೇವಿಕಾರಾಣಿ ರೋರಿಚ್‌ ಎಸ್ಟೇಟ್‌ ಅಭಿವೃದ್ಧಿ
· ರಾಜ್ಯದ ಆಯ್ದ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ.
· ಪ್ರವಾಸಿ ಮಿತ್ರರ ಸಂಖ್ಯೆ 1,000 ಕ್ಕೆ ಹೆಚ್ಚಳ ಹಾಗೂ 24X7 ಪ್ರವಾಸಿ ಸಹಾಯವಾಣಿ ತೆರೆಯಲು ಕ್ರಮ.
· ರಾಜ್ಯದ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಸಂಗ್ರಹಿಸಲು ONE- TAC Digital Grid ಬಳಕೆ.
· ಐತಿಹಾಸಿಕ ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ.
· ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಛೇರಿ (ಅಠಾರ ಕಛೇರಿ) ಕಟ್ಟಡವನ್ನು ರಾಜ್ಯ ಮಟ್ಟದ ವಸ್ತುಸಂಗ್ರಹಾಲಯವಾಗಿ ಪರಿವರ್ತನೆ.
ಯುವಸಬಲೀಕರಣ ಮತ್ತು ಕ್ರೀಡೆ
· ಗುರಿ-ಒಲಿಂಪಿಕ್ಪದಕ ಯೋಜನೆಯಡಿ ಒಲಿಂಪಿಕ್ಸ್‌ 2028 ಗೆ ತಯಾರಿ ಕೈಗೊಳ್ಳಲು ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ.ದಂತೆ ಪ್ರೋತ್ಸಾಹ ಧನ ವಿತರಣೆ. ಈ ವರ್ಷಕ್ಕೆ 6 ಕೋಟಿ ರೂ. ನೆರವು.
· ತಲಾ 2 ಕೋಟಿ ರೂ. ವೆಚ್ಚದಲ್ಲಿ 12 ತಾಲ್ಲೂಕು ಕೇಂದ್ರಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳ ನಿರ್ಮಾಣ; ಈ ಕಾಮಗಾರಿಗಳಿಗೆ 12 ಕೋಟಿ ರೂ. ಹಂಚಿಕೆ.
· ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಜಿಲ್ಲಾ ಕ್ರೀಡಾಂಗಣದಲ್ಲಿ ಒಟ್ಟು
3 ಕೋಟಿ ರೂ. ವೆಚ್ಚದಲ್ಲಿ ಶೂಟಿಂಗ್‌ರೇಂಜ್‌ನಿರ್ಮಾಣ.
· ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹ ಹಾಗೂ ಬುಡಕಟ್ಟು ಜನಾಂಗದವರಿಗೆ ಕ್ರೀಡಾಕೂಟ ಆಯೋಜನೆಗೆ 2 ಕೋಟಿ ರೂ.
· ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕೆ 3 ಕೋಟಿ ರೂ.; ಯಾದಗಿರಿಯ ಶಹಾಪುರದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆ ಪ್ರಾರಂಭ.
· 7 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾನ.
· ಬೆಂಗಳೂರು ಗ್ರಾಮಾಂತರ ಜಿಲ್ಲೆಯಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ; ಸೈಕ್ಲಿಂಗ್‌ ಉತ್ತೇಜನಕ್ಕೆ ೫ ಕೋಟಿ ರೂ. ವೆಚ್ಚದಲ್ಲಿ ಸೈಕ್ಲಿಂಗ್‌ ವೆಲೋಡ್ರೋಮ್‌ ನಿರ್ಮಾಣ; ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ 6 ಕೋಟಿ ರೂ.
· ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳ ಅಂತಾರಾಷ್ಟ್ರೀಯ ಮಟ್ಟಕ್ಕೆ ಉನ್ನತೀಕರಣ. ಚಾಮರಾಜನಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒಲಿಂಪಿಕ್‌ಮಾದರಿಯ (50 ಮೀಟರ್) ಈಜುಕೊಳ ನಿರ್ಮಾಣ.
· ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್‌, ಖೋಖೋ ಅಕಾಡೆಮಿ ಸ್ಥಾಪನೆಗೆ
2 ಕೋಟಿ ರೂ.
· ಕ್ರೀಡಾಪಟುಗಳು ತರಬೇತಿ ಪಡೆಯಲು ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಹಕಾರಿಯಾಗುವಂತೆ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗಿನ ಕ್ರೀಡಾಪಟುಗಳಿಗೆ ಶೇ.15 ರಷ್ಟು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ.
· ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ವೃತ್ತಿಪರ, ಪದವಿ ಮತ್ತು ಉನ್ನತ ಶಿಕ್ಷಣದ ಪ್ರವೇಶದಲ್ಲಿ ಶೇ.5ರಷ್ಟು ಕೃಪಾಂಕ
· ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ. ವರೆಗೆ ನೆರವು
· ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000 ರೂ.ಗಳಿಗೆ, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ರೂ.ಗಳಿಗೆ ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ. ಗಳಿಗೆ ಹೆಚ್ಚಳ
· ಯಲಬುರ್ಗಾ ಮತ್ತು ಟಿ.ನರಸೀಪುರದಲ್ಲಿ ಕ್ರೀಡಾಂಗಣಗಳ ಅಭಿವೃದ್ಧಿಗೆ ಆರು ಕೋಟಿ ರೂ. ಅನುದಾನ
ಅರಣ್ಯ ಮತ್ತು ಜೀವಿ ಪರಿಸರ ಶಾಸ್ತ್ರ
· ಇಂಗಾಲದ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾಗಿರುವ ಸಸ್ಯ ಪ್ರಭೇದಗಳನ್ನು ಬೆಳೆಸಲು “ಕೃಷಿ ಅರಣ್ಯ ಮತ್ತು ಕಾರ್ಬನ್‌ ಕ್ರೆಡಿಟ್‌” ನೀತಿ ಜಾರಿ.
· ವಿವಿಧ ಕಾರ್ಯಕ್ರಮದಡಿ ಅರಣ್ಯ ಪ್ರದೇಶದಲ್ಲಿ 28,494 ಹೆಕ್ಟೇರ್‌ನಲ್ಲಿ 213 ಲಕ್ಷ ಸಸಿಗಳನ್ನು ಹಾಗೂ ಅರಣ್ಯೇತರ ಪ್ರದೇಶದಲ್ಲಿ 1,200 ಹೆಕ್ಟೇರ್‌ನಲ್ಲಿ 3.50 ಲಕ್ಷ ಸಸಿಗಳನ್ನು ಬೆಳೆಸಿ ನೆಡುತೋಪುಗಳ ನಿರ್ವಹಣೆಗೆ ಕ್ರಮ.
· ಹವಮಾನ ಬದಲಾವಣೆಯ ಪರಿಣಾಮವನ್ನು ನಿಯಂತ್ರಿಸಲು “ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCMF)” ಸ್ಥಾಪನೆ.
· ವನ್ಯ ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಪ್ರಾಣ ಹಾನಿ ಪ್ರಕರಣದಲ್ಲಿ ನೀಡಲಾಗುತ್ತಿರುವ ದಯಾತ್ಮಕ ಧನ 20 ಲಕ್ಷ ರೂ.ಗಳಿಗೆ ಹೆಚ್ಚಳ.
· ಕೃಷಿ ಭೂಮಿಯಲ್ಲಿ ಸಾಗುವಾನಿ ಮತ್ತು ಇತರೆ ಬೆಲೆ ಬಾಳುವ ಮರಗಳನ್ನು ಬೆಳೆಸಲು ಉತ್ತೇಜನ ನೀಡಲು ಸಾಗಾಣಿಕೆ ನಿಯಮಾವಳಿಗಳ ಸರಳೀಕರಣ.
· ರಾಜ್ಯದಲ್ಲಿ ಕಾಡಾನೆ ಹಾಗೂ ಚಿರತೆ ಹಾವಳಿಯನ್ನು ನಿಯಂತ್ರಿಸಲು ರಚಿಸಿರುವ ಕಾರ್ಯಪಡೆಗಳ ಕಾರ್ಯನಿರ್ವಹಣೆಗೆ 17 ಕೋಟಿ ರೂ.
· ಮಾನವ-ಆನೆ ಸಂಘರ್ಷ ತಡೆಗಟ್ಟಲು ಎರಡು ವರ್ಷಗಳಲ್ಲಿ 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿ. 2025-26ನೇ ಸಾಲಿನಲ್ಲಿ 60 ಕೋಟಿ ರೂ. ಮೀಸಲು.
· ಬೆಂಗಳೂರು ನಗರದಲ್ಲಿರುವ 3,000 ಕೊಳಚೆ ನೀರು ಸಂಸ್ಕರಣಾ ಘಟಕಗಳಿಗೆ (STP) ರಿಯಲ್‌ ಟೈಮ್‌ ವಾಟರ್‌ ಕ್ವಾಲಿಟಿ ಮಾನಿಟರಿಂಗ್‌ ಸಿಸ್ಟಮ್‌ ಗಳನ್ನು (RTWQMS) ಹಂತ ಹಂತವಾಗಿ ಅಳವಡಿಸಲು ಕ್ರಮ.
· ಕೈಗಾರಿಕೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸ್ವಯಂ ಪ್ರಮಾಣೀಕರಣ ಮತ್ತು ಮಂಡಳಿಯಲ್ಲಿ ಲಭ್ಯವಿರುವ ಅನುಪಾಲನಾ ದಾಖಲೆಗಳನ್ನು ಆಧರಿಸಿ ಸ್ವಯಂಚಾಲಿತ ಸಮ್ಮತಿ ನವೀಕರಣ ನೀಡಲು ಕ್ರಮ
ಕಂದಾಯ
· ಇ-ಜಮಾಬಂದಿ ತಂತ್ರಾಂಶ ಅಭಿವೃದ್ಧಿಪಡಿಸಿ ಪ್ರಸ್ತುತ ಸಾಲಿನಿಂದ ಜಾರಿ.
· ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಇ-ಪೌತಿ ಆಂದೋಲನ.
· ಹೊಸ ಭೂ-ಕಂದಾಯ ಕಾಯ್ದೆ ಜಾರಿಗೆ ಕ್ರಮ.
· ಸುಸಜ್ಜಿತ 100 ನಾಡ ಕಛೇರಿಗಳನ್ನು ನಿರ್ಮಿಸಲು ನಿರ್ಧಾರ.
· ಪರಿಣಿತರ ಸಮಿತಿ ರಚಿಸಿ ಹೊಸ ಕರ್ನಾಟಕ ಭೂ ಕಂದಾಯ ಕಾಯ್ದೆ ಜಾರಿಗೊಳಿಸಲಾಗುವುದು.
· ಸುಸರ್ಜಿತ ೧೦೦ ನಾಡಕಛೇರಿಗಳನ್ನು ನಿರ್ಮಾಣ ಮಾಡಲಾಗುವುದು.
· ಹೊಸದಾಗಿ ರಚನೆಯಾದ ತಾಲ್ಲೂಕುಗಳ ಪೈಕಿ 21 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಕ್ರಮ.
· ಭೂಮಾಪನ ಇಲಾಖೆಯು ಕೈಗೊಳ್ಳುತ್ತಿರುವ ಸಾಂಪ್ರದಾಯಿಕ ಸರ್ವೆ ಕಾರ್ಯ ಡಿಜಿಟಲೀಕರಣ.
· ಆಯ್ದ ನಗರಸಭೆ / ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಕ್ಷಾ ಯೋಜನೆಯಡಿಯಲ್ಲಿ ಡ್ರೋಣ್‌ ಬಳಸಿ ಸರ್ವೆ ಮಾಡುವ ಮೂಲಕ ಆಸ್ತಿಗಳ ಡಿಜಿಟಲೀಕರಣ.
· ಸಕಾಲ ಕಾಯ್ದೆಯಡಿ ಸಾಮಾಜಿಕ ಭದ್ರತಾ ಪಿಂಚಣಿ ಮಂಜೂರಾತಿ ಕಾಲಮಿತಿ 21 ದಿನಗಳಿಗೆ ಕಡಿತ.
· ಒಟ್ಟು 5ಸಾವಿರ ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಜಲ ಭದ್ರತೆ ಮತ್ತು ವಿಪತ್ತು ತಡೆಯುವಿಕೆ ಕಾರ್ಯಕ್ರಮ ಜಾರಿ
i) ಬಿಬಿಎಂಪಿ ವ್ಯಾಪ್ತಿಯಲ್ಲಿ 2ಸಾವಿರ ಕೋಟಿ ರೂ. ವೆಚ್ಚದಲ್ಲಿ ಪ್ರವಾಹ ನಿರ್ವಹಣಾ ವ್ಯವಸ್ಥೆ.
ii) ಬಿಡಬ್ಲ್ಯೂಎಸ್ಎಸ್‌ಬಿ ವತಿಯಿಂದ 1,070 ಕೋಟಿ ರೂ. ವೆಚ್ಚದಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಹಾಗೂ ಒಳಚರಂಡಿ ಪಂಪಿಂಗ್ ವ್ಯವಸ್ಥೆ.
iii) ಸಾಂಸ್ಥಿಕ ಸುಧಾರಣೆ ಕ್ರಮಗಳಿಗೆ 1,680 ಕೋಟಿ ರೂ.
iv) 250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ
41 ಕೆರೆ ತುಂಬಿಸುವ ಕಾಮಗಾರಿ ಅನುಷ್ಠಾನ.
· ರಾಜ್ಯ ವಿಪತ್ತು ಉಪಶಮನ ನಿಧಿ ಹಾಗೂ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿ ಅನುದಾನದಡಿ:
i) ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಭೂ ಕುಸಿತ ತಡೆ ಕಾರ್ಯಕ್ರಮ.
ii) ಬೆಂಗಳೂರು ನಗರದಲ್ಲಿ 239 ಕೋಟಿ ರೂ. ವೆಚ್ಚದಲ್ಲಿ ಮಳೆ ಚರಂಡಿ ಪುನರ್ ನಿರ್ಮಾಣ, ಕೆರೆಗಳ ಪುನಃಶ್ಚೇತನ.
iii) 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಹೊಂಡಗಳ ನಿರ್ಮಾಣ.
iv) ಸಮುದ್ರ ಕೊರೆತ ತಪ್ಪಿಸಲು 200 ಕೋಟಿ ರೂ. ಯೋಜನೆ
v) ನವಲಗುಂದ ತಾಲ್ಲೂಕಿನ ಬೆಣ್ಣೆಹಳ್ಳದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಪ್ರವಾಹ ನಿಯಂತ್ರಣ ಕಾಮಗಾರಿ ಅನುಷ್ಠಾನ.
vi) ಕೊಪ್ಪಳ ಜಿಲ್ಲೆಯ ಹಿರೇಹಳ್ಳದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತುವ ಕಾಮಗಾರಿ
· ಕಾವೇರಿ-2 ತಂತ್ರಾಂಶದ ಸಹಭಾಗಿತ್ವದಲ್ಲಿಯೇ ನೂತನ ಇ-ಸ್ಟಾಂಪಿಂಗ್ ವ್ಯವಸ್ಥೆ ಜಾರಿ.
· ಕಾವೇರಿ-2 ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯಡಿಯಲ್ಲಿಯೇ ನಿರ್ವಹಿಸಲು ಕ್ರಮ.
· 76 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 36 ನೋಂದಣಿ ಕಛೇರಿಗಳ ಆಧುನೀಕರಣ.
· ಒತ್ತುವರಿಯಾಗಿರುವ 328 ದೇವಾಲಯಗಳ ಆಸ್ತಿಗಳನ್ನು ಸಂರಕ್ಷಿಸಲು
ʻಭೂ-ವರಾಹʼ ಯೋಜನೆಯಡಿ ಸ್ಥಿರಾಸ್ತಿಗಳ ದಾಖಲೀಕರಣ.
· ಅರ್ಚಕರ ವಾರ್ಷಿಕ ತಸ್ತೀಕ್‌ ಮೊತ್ತ 72ಸಾವಿರ ರೂ.ಗಳಿಗೆ ಹೆಚ್ಚಳ.
· ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಿಬ್ಬಂದಿ ವೇತನ ಸರ್ಕಾರದ ವತಿಯಿಂದ ಪಾವತಿಸಲು ಕ್ರಮ.
· ʻಕರ್ನಾಟಕ ದೇವಾಲಯಗಳ ವಸತಿ ಕೋಶʼ ಸ್ಥಾಪನೆ.
· ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 34 ಕೋಟಿ ರೂ. ಅನುದಾನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
· ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯ ಕಲ್ಪಿಸಲು ಕ್ರಮ.
· ಬೆಂಗಳೂರಿನಲ್ಲಿರುವ ಚಲನಚಿತ್ರ ಅಕಾಡೆಮಿ ನಿವೇಶನದಲ್ಲಿ ಪಿಪಿಪಿ ಮಾದರಿಯಲ್ಲಿ ಚಿತ್ರಮಂದಿರ ಸಮುಚ್ಛಯ ಅಭಿವೃದ್ಧಿ.
· ಕನ್ನಡ ಚಲನಚಿತ್ರಗಳನ್ನು ಡಿಜಿಟಲ್‌ ಹಾಗೂ ನಾನ್‌ ಡಿಜಿಟಲ್‌ ಮಾದರಿಯಲ್ಲಿ ಸಂರಕ್ಷಿಸಲು ಚಲನಚಿತ್ರ ಭಂಡಾರ ಸ್ಥಾಪನೆ.
· ಪತ್ರಕರ್ತರ ಮಾಸಾಶನ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ.
· ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆ ಸೃಜಿಸಲು ಕ್ರಮ.
· ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ “ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ” ಯೋಜನೆ ಅನುಷ್ಠಾನ.
· ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ.
· ಎಲ್ಲಾ ವಿಧದ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ 200 ರೂ.ಗೆ ಮಿತಿಗೊಳಿಸಲು ಕ್ರಮ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ
· ಕರ್ನಾಟಕ -ಜಿಐಎಸ್‌ ಪೋರ್ಟಲ್‌ ಉನ್ನತೀಕರಣಕ್ಕೆ ಕ್ರಮ
· ಎಐ ಮತ್ತು ಜಿಐಎಸ್‌ ತಂತ್ರಜ್ಞಾನ ಬಳಸಿಕೊಂಡು ಹಾಜರಾತಿ ನಿರ್ವಹಣಾ ವ್ಯವಸ್ಥೆ ಸುಧಾರಣೆ.
· ಸೈಬರ್‌ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಆದ್ಯತೆ.
· ಆಡಳಿತದಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಎಲ್ಲಾ ನಗದು ಮತ್ತು ನಗದು ರಹಿತ ಯೋಜನೆಗಳು ಡಿಬಿಟಿ ವ್ಯಾಪ್ತಿಗೆ.
· 10 ಸಾವಿರ ಕಛೇರಿಗಳಿಗೆ KSWAN ಯೋಜನೆ ವಿಸ್ತರಣೆ.
· AI ಆಧಾರಿತ ವ್ಯವಸ್ಥೆ ಅಭಿವೃದ್ಧಿಗೆ ಕ್ರಮ.
· ಸರ್ಕಾರದಿಂದ ತನ್ನದೇ ಆದ ಇ-ಆಫೀಸ್‌ ತಂತ್ರಾಂಶ ಅಭಿವೃದ್ಧಿ.
· ರಾಜ್ಯವನ್ನು ನಾಗರಿಕ ಕೇಂದ್ರಿತ ಡಿಜಿಟಲ್‌ ಅಡಳಿತದಲ್ಲಿ ಮುಂಚೂಣಿಗೆ ತರಲು ಕ್ರಮ.
ಒಳಾಡಳಿತ
· ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಲವು ಕ್ರಮಗಳ ಜಾರಿ.
i) ಬೆಂಗಳೂರು ಸೇಫ್ ಸಿಟಿ ಯೋಜನೆ 667 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
ii) ನಗರದಾದ್ಯಂತ ಒಟ್ಟು 60 ಮಹಿಳಾ ಔಟ್‌ ಪೋಸ್ಟ್‌ ಸ್ಥಾಪನೆ.
iii) 30 ಕೋಟಿ ರೂ. ವೆಚ್ಚದಲ್ಲಿ 12 ಪೋಲೀಸ್ ಠಾಣೆ ಸೇರಿ ಕಛೇರಿಗಳ ನಿರ್ಮಾಣ.
iv) ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ಕಾರ್ಯಕ್ಷಮತೆ ಹೆಚ್ಚಳ.
· ಪೊಲೀಸ್‌ ಮೊಬಿಲಿಟಿ ಯೋಜನೆಯಡಿ ಒಂದು ಸಾವಿರ ವಾಹನ ಖರೀದಿಗೆ 50 ಕೋಟಿ ರೂ.
· ನಕ್ಸಲ್‌ ನಿಗ್ರಹ ಪಡೆ ವಿಸರ್ಜನೆ, ನಕ್ಸಲ್‌ ಪುನರ್ವಸತಿಗೆ ೧೦ ಕೋಟಿ ರೂ. ಮೀಸಲು
· ಮಾದಕ ದ್ರವ್ಯ ಮತ್ತು ಸೈಬರ್‌ ಅಪರಾಧ ವಿಭಾಗ ಬಲಪಡಿಸಲು 5 ಕೋಟಿ ರೂ. ನೆರವು.
· ಎರಡು ಭಾರತೀಯ ಮೀಸಲು ಪೊಲೀಸ್‌ ಪಡೆ ಸ್ಥಾಪಿಸಲು 80 ಕೋಟಿ ರೂ. ಅನುದಾನ.
· ಪೊಲೀಸ್‌ ಗೃಹ-2025 ಯೋಜನೆಯಡಿ ವಸತಿ ಗೃಹಗಳ ನಿರ್ಮಾಣ ಕಾರ್ಯಕ್ಕೆ 300 ಕೋಟಿ ರೂ. ಅನುದಾನ
· ಬೆಂಗಳೂರು ನಗರದಲ್ಲಿ ಪೊಲೀಸ್‌ ವಿಭಾಗಗಳ ಸಂಖ್ಯೆ 11ಕ್ಕೆ ಹೆಚ್ಚಳ.
· 4 ವಲಯಗಳಲ್ಲಿ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ ಸ್ಥಾಪನೆ.
· ಪೊಲೀಸ್‌ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ ತಪಾಸಣೆ ಮೊತ್ತ 1500 ರೂ. ಗೆ ಹೆಚ್ಚಳ.
· ಆಹಾರ ಭತ್ಯೆಯ ದರ 300 ರೂ. ಗೆ ಹೆಚ್ಚಳ
· ಗೃಹರಕ್ಷಕ ಮತ್ತು ಪೌರ ರಕ್ಷಣಾ ಸ್ವಯಂ ಸೇವಕರು ಕರ್ತವ್ಯದ ವೇಳೆ ಮರಣ ಹೊಂದಿದಲ್ಲಿ ನೀಡುವ ಪರಿಹಾರ ಧನ10 ಲಕ್ಷ ರೂ.ಗಳಿಗೆ ಹೆಚ್ಚಳ.
· ಕಾರಾಗೃಹ ಇಲಾಖೆ ಮೂಲಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.
· ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಉಪಕರಣಗಳ ಖರೀದಿ ಮತ್ತು ಕಟ್ಟಡ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ. ಇಲಾಖೆಯ ಆಧುನೀಕರಣಕ್ಕೆ 330 ಕೋಟಿ ರೂ, ಮೈಸೂರು ವ್ಯಾಪ್ತಿಯಲ್ಲಿ ಹೊಸ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ.
ಸಾರಿಗೆ
· ʻಶಕ್ತಿʼ ಯೋಜನೆಯಡಿ ಪ್ರಸಕ್ತ ವರ್ಷ ಯೋಜನೆಗೆ ಈ ಸಾಲಿನಲ್ಲಿ 5,300 ಕೋಟಿ ರೂ. ಅನುದಾನ.
· ಬೆಂಗಳೂರು ಮೆಜೆಸ್ಟಿಕ್‌ನಲ್ಲಿರುವ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಾಣ.
· ಈ ಸಾಲಿನಲ್ಲಿ 42 ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣ ಪೂರ್ಣ. 2025-26ನೇ ಸಾಲಿನಲ್ಲಿ 3ಕಡೆಗಳಲ್ಲಿ 20ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣ.
· ಐದು ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿನ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚ.
· ರಾಜ್ಯದಲ್ಲಿ ವಾಹನ ಸಂಚಾರ ನಿಯಂತ್ರಣಕ್ಕೆ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾ ಅಳವಡಿಕೆ.
· ರಾಜ್ಯದಲ್ಲಿನ ಸಾರಿಗೆ ಸಂಪರ್ಕ ಸುಧಾರಿಸಲು ಹಲವು ಉಪಕ್ರಮಗಳ ಅನುಷ್ಠಾನ.
i) ಒಟ್ಟಾರೆ 14,750ಸಾವಿರ ಹೊಸ ವಿದ್ಯುತ್‌ ಚಾಲಿತ ಬಸ್ಸುಗಳ ಸೇರ್ಪಡೆಗೆ ಕ್ರಮ.
ii) ಹಣಕಾಸು ಸಂಸ್ಥೆಗಳಿಂದ 2ಸಾವಿರ ಕೋಟಿ ರೂ. ಸಾಲ ಪಡೆಯಲು ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರದ ಖಾತರಿ
iii) ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಹೊಸ ಸ್ಯಾಟಲೈಟ್‌ ಬಸ್‌ ನಿಲ್ದಾಣ ನಿರ್ಮಾಣ.
iv) ಮೈಸೂರಿನ ಬನ್ನಿಮಂಟಪದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಬಸ್‌ ನಿಲ್ದಾಣ ನಿರ್ಮಾಣ.
ಕಾನೂನು
· ನ್ಯಾಯಾಲಯಗಳ ಕಾರ್ಯಕ್ಷಮತೆ ಸುಧಾರಣೆಗೆ ಎರಡು ಕೋಟಿ ರೂ. ವೆಚ್ಚದಲ್ಲಿ Smart System ಅನುಷ್ಠಾನ.
· ನ್ಯಾಯಾಲಯಗಳಲ್ಲಿರುವ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಡಿಜಿಟಲ್ ಗ್ರಂಥಾಲಯಗಳನ್ನು ಪ್ರಾರಂಭಿಸಲು ಎರಡು ಕೋಟಿ ರೂ. ಹಂಚಿಕೆ.
· ಬಾರ್ ಅಸೋಸಿಯೇಷನ್ ಸದಸ್ಯರಿಗಾಗಿ 50 ಲಕ್ಷ ರೂ. ವೆಚ್ಚದಲ್ಲಿ ಆನ್‌ಲೈನ್‌ ಗ್ರಂಥಾಲಯ ಸ್ಥಾಪನೆ.
· ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ವಿಶೇಷ ತ್ವರಿತಗತಿ ನ್ಯಾಯಾಲಯ ಬಾಗಲಕೋಟೆಯಲ್ಲಿ ಸ್ಥಾಪನೆ.
· ಕೊಪ್ಪಳ ಜಿಲ್ಲಾ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ 50 ಕೋಟಿ ರೂ., ಕುಕನೂರು ಹಾಗೂ ಕಾರಟಗಿ ತಾಲ್ಲೂಕಿನಲ್ಲಿ JMFC ನ್ಯಾಯಾಲಯ ಸ್ಥಾಪನೆ.
ತೆರಿಗೆ ಪ್ರಸ್ತಾವನೆ:
ವಾಣಿಜ್ಯ ತೆರಿಗೆ ಇಲಾಖೆ
· ಫೆಬ್ರವರಿ ಮಾಹೆಯ ವೃತ್ತಿ ತೆರಿಗೆ 200 ರೂ. ಗಳಿಂದ 300 ರೂ. ಗಳಿಗೆ ಹೆಚ್ಚಳ.
· 2025-26 ರಲ್ಲಿ 1,20,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ನೋಂದಣಿ ಮತ್ತು ಮುದ್ರಾಂಕ
· 2025-26 ರಲ್ಲಿ 28,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಅಬಕಾರಿ
· 2025-26 ರಲ್ಲಿ 40,000 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿ
ಮೋಟಾರು ವಾಹನ
· 2025-26 ನೇ ಸಾಲಿಗೆ 15000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ
ಗಣಿ ಮತ್ತು ಭೂ ವಿಜ್ಞಾನ
· 2025-26 ನೇ ಸಾಲಿಗೆ 9000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button