Karnataka News

*ಆಟಿಸಂ, ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ ಮಕ್ಕಳ ಆರೈಕೆದಾರರಿಗೂ ಪ್ರೋತ್ಸಾಹಧನ ಘೋಷಣೆ*

ಬೆಳಗಾವಿ, ಮೈಸೂರು ವಿಶೇಷ ಮಕ್ಕಳ ಸರ್ಕಾರಿ ವಸತಿ ಶಾಲೆಗಳ ಉನ್ನತೀಕರಣ

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ಹಲವು ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ. ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು.

Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು.

Home add -Advt

ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲಾಗುವುದು.

ವಿಶೇಷ ಪಾಲನಾ ಯೋಜನೆಯಡಿ ಹೆಚ್‌.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಟಿಕ ಆಹಾರ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಧನಸಹಾಯವನ್ನು 1,000 ರೂ.ನಿಂದ 2,000 ರೂ.ಗೆ ಹೆಚ್ಚಿಸಲಾಗುವುದು.

ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ 1,750 ರೂ.ಗಳಿಗೆ ಹೆಚ್ಚಿಸಲಾಗುವುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button