Karnataka News
*ರನ್ಯಾ ರಾವ್ ಪ್ರಕರಣ: ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಕುರಿತು ತನಿಖೆಗೆ ಗೌರವ್ ಗುಪ್ತಾ ಸಮಿತಿ ನೇಮಕ*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಚಿನ್ನ ಸಾಗಾತ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆಗೆ ಸರ್ಕಾರ ಸಮಿತಿ ರಚನೆ ಮಡಿದೆ.
ರನ್ಯಾ ರಾವ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆಗೆ ಗೌರವ್ ಗುಪ್ತಾ ನೇತೃತ್ವದಲ್ಲಿ ಸಮಿತಿ ರಚಿಸಿದೆ. ರನ್ಯಾ ರಾಅವ್ ಐಪಿಎಸ್ ಅಧಿಕಾರಿ ರಾಮಚಮ್ದ್ರ ರವ್ ಅವರ ಹೆಸರು ಬಳಸಿಕೊಂಡು ವಿಮಾನ ನಿಲ್ದಾಣಗಳಲ್ಲಿ ಶಿಷ್ಠಾಚಾರ ನಿಮಯ ಉಲ್ಲಂಘನೆ ಮಾಡಿ, ಅದ್ದನ್ನು ದುರ್ಬಳಕೆ ಮಾಡಿಕೊಂಡು ತಪಾಸಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂಬ ವರದಿಗಳು ಪ್ರಸಾರವಗೌತ್ತಿವೆ. ಈ ಹಿನ್ನೆಲೆಯಲ್ಲಿ ಗೌರವ್ ಗುಪ್ತಾ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಲಾಗಿದೆ.