
ಪ್ರಗತಿವಾಹಿನಿ ಸುದ್ದಿ: ಕುರಿಗಾಹಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಮೂಲಕ ಹಾಲುಮತ ಮಹಾಸಭಾ ಮುಖಂಡರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಾಗಲಕೋಟೆ ಜಿಲ್ಲೆ, ಬಾದಾಮಿ ತಾಲ್ಲೂಕು, ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಕತ್ತು ಕತ್ತರಿಸಿ ಹತ್ಯೆ ಮಾಡಲಾಗಿದೆ. ಕೊಪ್ಪಳ ಜಿಲ್ಲೆ, ಯಲಬುರ್ಗ ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮದ ಕುರುಬ ಮಹಿಳಾ ಪಿ.ಡಿ.ಓ ಮೇಲೆ ಹಲ್ಲೆ ನಡೆಸಲಾಗಿದೆ. ಕಲಬುರಗಿ ಜಿಲ್ಲೆ, ಅಳಂದ ತಾಲ್ಲೂಕು, ಖಾನಾಪುರ ಗ್ರಾಮದಲ್ಲಿ “ಕುರುಬರಿಗೆ ಬಹಿಷ್ಕಾರ” ಹಾಕಲಾಗಿದೆ. ಈ ಘಟನೆಗಳು ಖಂಡನೀಯ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಉಗಲವಾಟ ಗ್ರಾಮದಲ್ಲಿ ಕುರಿಗಾಹಿ ಯುವಕ ಶರಣಪ್ಪ ಜಮ್ಮನಕಟ್ಟಿಯ ಮೇಲೆ ದುಷ್ಕರ್ಮಿಗಳು ರಾಕ್ಷಸಿಕೃತ್ಯ ಮೆರೆದು ಕತ್ತು ಸೀಳಿ ಕೊಂದು ಹಾಕಿದ್ದಾರೆ. ಭಾರತ ದೇಶದ ಸಂಸ್ಕೃತಿಗೆ ಕುರುಬರ ಕೊಡುಗೆ ಬಹಳ ದೊಡ್ಡದಿದೆ. ಕುರುಬರ ವಿಶ್ವದ ಮೂಲ ಪುರುಷರು, ದೈವಾಂಶ ಸಂಭೂತರು ಎಂದೆಲ್ಲಾ ಕರೆಯಿಸಿಕೊಳ್ಳುತ್ತಿರುವ ಮುಗ್ಧ ಸಮುದಾಯದ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಒಂದೇ ತಿಂಗಳಿನಲ್ಲಿ ಮೂರು ಪ್ರಕರಣಗಳು ನಡೆದಿವೆ ಎಂದು ಹಾಲುಮತ ಮಹಾಸಭಾದ ರಾಜ್ಯಸಂಚಾಲಕ ಶ್ರೇಷ್ಟ ಪಶುಪಾಲಕ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಾರುತಿ ಮರಡಿಮರ‍್ಯ ಅವರು ಸರ್ಕಾರ ನಮಗೆನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.
ಕೊಪ್ಪಳ ಜಿಲ್ಲೆ, ಯಲಬುರ್ಗ ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮದ ಕುರುಬ ಮಹಿಳಾ ಪಿ.ಡಿ.ಓ ಮೇಲೆ ಹಲ್ಲೆ, ಕಲಬುರಗಿ ಜಿಲ್ಲೆ, ಅಳಂದ ತಾಲ್ಲೂಕು, ಖಾನಾಪುರ ಗ್ರಾಮದಲ್ಲಿ “ಕುರುಬರಿಗೆ ಬಹಿಷ್ಕಾರ” ಹೀಗೆ ಬಾಗಲಕೋಟೆ ಜಿಲ್ಲೆ ಮಾತ್ರವಲ್ಲದೇ ರಾಜ್ಯಾದ್ಯಂತ ಕುರಿಗಾಹಿಗಳು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಮಳೆ, ಗಾಳಿ,
ಬಿಸಿಲೆನ್ನದೇ ಊರೂರು ಸುತ್ತುವ ಪ್ರಕೃತಿಯ ಮಡಿಲಿನಲ್ಲಿ ಪ್ರಕೃತಿಯ ಆರಾಧಕರಾಗಿರುವ ಕುರಿಗಾಹಿಗಳಿಗೆ ರಕ್ಷಣೆಯಿಲ್ಲದಂತಾಗಿದೆ. ಅರಣ್ಯ ಇಲಾಖೆಯವರ ಮಾನಸಿಕ, ದೈಹಿಕ ಹಿಂಸೆಗಳು ಜೊತೆಗೆ ಕಳ್ಳಕಾಕರಿಂದ ಕುರಿಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆಯ ಜೊತೆ ಕೊಲೆಗಾರರು ನಿರ್ದಯಿಗಳಾಗಿ ಕತ್ತು ಸೀಳಿ ಕೊಂದು ಹಾಕುತ್ತಿದ್ದಾರೆ.
ಸರ್ಕಾರ ಬಜೆಟ್‌ನಲ್ಲಿ ಕುರಿಗಾರರಿಗೆ ಘೋಷಣೆಗಳನ್ನು ಮಾಡುತ್ತಿವೆಯಾದ್ರೂ ಕುರಿಗಾರರಿಗೆ ಅನುಕೂಲಗಳು ಮರೀಚಿಕೆಯಾಗಿವೆ. ಸರ್ಕಾರ ಕಾಯಿದೆಗಳನ್ನು ಮಾಡಿವೆ. ಬಂದೂಕು ಲೈಸನ್ಸ್ ಬಗ್ಗೆ ಘೋಷಣೆ ಮಾಡಿದೆ ಆದರೆ ಯಾವುದೂ ಸಹ ಕಾರ್ಯರೂಪಕ್ಕೆ ಬರುತ್ತಿಲ್ಲ. ಕುರಿಗಾಹಿಗಳು ದೇಶದ ಅವಿಭಾಜ್ಯ ಅಂಗವಾಗಿದ್ದು, ಅವರ ಜೀವನೋಪಾಯ ಮತ್ತು ಸುರಕ್ಷತೆಗೆ ರಾಜ್ಯ ಸರ್ಕಾರದ ತುರ್ತು ಗಮನಹರಿಸಬೇಕು.
೧. ತನಿಖೆ ಮತ್ತು ನ್ಯಾಯ : ಹತ್ಯೆ ಸೇರಿದಂತೆ ಎಲ್ಲಾ ಹಿಂಸಾತ್ಮಕ ಘಟನೆಗಳಿಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಕಠಿಣ ಶಿಕ್ಷೆ ನೀಡಬೇಕು
೨. ಸುರಕ್ಷತೆ : ಪೊಲೀಸ್ ಪೆಟ್ರೋಲಿಂಗ್ ಹೆಚ್ಚಿಸಿ, ಕುರಿಗಾಹಿಗಳಿಗೆ ವಿಶೇಷ ರಕ್ಷಣೆ ಒದಗಿಸಬೇಕು.
೩. ಪರಿಹಾರ ಮತ್ತು ಸಹಾಯ : ಹತ್ಯೆಗೀಡಾದ ಕುಟುಂಬಕ್ಕೆ ಆರ್ಥಿಕ ಪರಿಹಾರ ನೀಡಬೇಕು
೪. ಬಂದೂಕು ತರಬೇತಿ ನೀಡಿ, ಲೈಸನ್ಸ್ ನೀಡುವ ಪ್ರಕ್ರಿಯೆ ಸರಳೀಕೃತಗೊಳಿಸಬೇಕು
ಇಂತಹ ಬರ್ಬರ ಹತ್ಯೆಗಳು ಭಯವನ್ನು ಉಂಟು ಮಾಡುತ್ತಿವೆ. ಜೀವ ರಕ್ಷಣೆ ಮಾಡಬೇಕಾದುದ್ದು ಸರ್ಕಾರದ ಕರ್ತವ್ಯವಾಗಿದೆ.
ಸ್ಥಳೀಯ ಪೊಲೀಸರು ಸೌಹಾರ್ದತೆಯಿಂದ , ಸ್ಥಳೀಯ ಆಡಳಿತದ ಸಹಕಾರದಿಂದ ಕುರಿಗಾರರಿಗೆ ಆತ್ಮಸೈರ್ಯ ತುಂಬುವAತಹ
ಪ್ರಾಮಾಣಿಕ ಕೆಲಸವಾಗಬೇಕಿದೆ ಮಾನ್ಯ ಮುಖ್ಯಮಂತ್ರಿಗಳು ನಿರ್ಲಕ್ಷ ಮಾಡದೇ ಪ್ರತಿಯೊಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್
ವರಿಷ್ಠಾಧಿಕಾರಿಗಳಿಗೆ ಆದೇಶವನ್ನು ಮಾಡಬೇಕು ಎಂದು ಮನವಿ ಮಾಡಿದರು.