
ಪ್ರಗತಿವಾಹಿನಿ ಸುದ್ದಿ: ಭಾರತಕ್ಕೆ ಪ್ರವಾಸಕ್ಕೆಂದು ಬಂದಿದ್ದ ಇಂಗ್ಲೆಂಡ್ ಮೂಲದ ಯುವತಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಿತನಾಗಿದ್ದ ವ್ಯಕ್ತಿಯೋರ್ವನನ್ನು ಭಾರತದ ಪ್ರವಾಸದ ವೇಳೆ ಯುವತಿ ದೆಹಲಿಯಲ್ಲಿ ಭೇಟಿಯಾಗಿದ್ದಾಳೆ. ಭೇಟಿ ವೇಳೆ ಹೋಟೆಲ್ ನಲ್ಲಿ ಡಿನರ್ ಪಾರ್ಟಿ ಮಾಡಿದ್ದಾರೆ. ಬಳಿಕ ಹೋಟೆಲ್ ರೂಮ್ ಗೆ ಕರೆದೊಯ್ದು ವ್ಯಕ್ತಿ ಹಾಗೂ ಆತನ ಸ್ನೇಹಿತ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ.
ದೆಹಲಿಯ ಮಹಿಪಾಲ್ಪುರ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಯುವತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.