Karnataka News

*ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲು ಶುರುವಾಗಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ ನಿನ್ನೆ ಭಾರಿ ಮಳೆಯಾಗಿದೆ. ಮಂಗಳೂರಿನಲ್ಲಿ ಗುಡುಗು, ಮಿಂಚು ಮಳೆಯಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವುಂಟಾಗಿದೆ.

ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಂದೆಡೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Home add -Advt

ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಮೈಸೂರು, ಕೊಡಗು, ಚಾಮರಾಜನಗರ, ತುಮಕೂರು, ಹಾಸನ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button