
ಪ್ರಗತಿವಾಹಿನಿ ಸುದ್ದಿ: ಸಮವಸ್ತ್ರದಲ್ಲಿ ಸ್ವಾಮೀಜಿ ಕಾಲಿಗೆ ಬಿದ್ದ ಪೊಲೀಸರ ವಿರುದ್ಧ ಗೃಹ ಇಲಾಖೆ ಶಿಸ್ತುಕ್ರಮ ಕೈಗೊಂಡು ಬೇರೆ ಊರುಗಳಿಗೆ ವರ್ಗಾವಣೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಹುನಗುಂದ ತಾಲೂಕಿನ ಸಿದ್ದನಕೊಳ್ಳದ ಶಿವಕುಮಾರ ಸ್ವಾಮಿಜಿ ಅವರ ಕಾಲಿಗೆ ಬಿದ್ದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸ್ವಾಮೀಜಿ ಬಾದಾಮಿಗೆ ಆಗಮಿಸಿದ್ದ ವೇಳೆ ಪೊಲೀಸ್ ಸಿಬ್ಬಂದಿಗಳು ಸ್ವಾಮೀಜಿ ಕಾಲಿಗೆ ಬಿದ್ದಿದ್ದಾರೆ. ಈ ವೇಳೆ ಸ್ವಾಮೀಜಿ ಪೊಲೀಸರಿಗೆ ಹಣ ನೀಡಿ ಆಶಿರ್ವಾದ ಮಾಡಿದ್ದರು.
ಪೊಲೀಸ್ ಸಮವಸ್ತ್ರದಲ್ಲಿದ್ದವರು ಕಲೈಗೆ ಬೀಳಬಾರದು ಬದಲಾಗಿ ಸೆಲ್ಯೂಟ್ ಹೊಡೆಯಬೇಕು ಎಂದು ಸ್ವಾಮೀಜಿ ಹೇಳಿದ್ದರು. ಸ್ವಾಮೀಜಿ ಹಾಗೂ ಪೊಲೀಸ್ ಸಿಬ್ಬಂದಿ ಮಾತುಗಳು ವೈರಲ್ ಆಗಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿದ ಬಾಗಲಕೋಟೆ ಎಸ್ ಪಿ ಅಮರನಾಥ್ ರೆಡ್ಡಿ, ಸಮವಸ್ತ್ರದಲ್ಲಿ ಸ್ವಾಮೀಜಿ ಕಾಲಿಗೆ ಬಿದ್ದ ಆರು ಕಾನ್ಸ್ ಟೇಬಲ್ ಗಳ ಮೇಲೆ ಶಿಸ್ತುಕ್ರಮ ಕೈಗೊಂಡು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.