
ಪ್ರಗತಿವಾಹಿನಿ ಸುದ್ದಿ: ಕಂಪನಿಯೊಂದರ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಆರೋಪಿಗಳನ್ನು ಬಂಧಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರಿನ ಈಶಾನ್ಯ ವಿಭಾಗದ ಸೆನ್ ಠಾಣೆ ಎಸಿಪಿ ಹಾಗೂ ಎಎಸ್ಐ ಇಬ್ಬರೂ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಸೆನ್ ಪೊಲೀಸ್ ಠಾಣೆಯ ಎಸಿಪಿ ತನ್ವೀರ್ ಎಸ್.ಆರ್ ಹಾಗೂ ಎಎಸ್ಐ ಕೃಷ್ಣಮೂರ್ತಿ ಬಂಧಿತರು.
ಉದ್ಯಮ ಸಮೂಹದ ವೆಬ್ ಸೈಟ್ ಒಂದನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದರು. ಈ ಬಗ್ಗೆ ಕಂಪನಿ ಮಾಲೀಕ ಮಧುಸೂದನ್ ಈಶಾನ್ಯ ವಿಭಾಗದ ಸೆನ್ ಠಾಣೆಗೆ ದೂರು ನೀಡಿದ್ದರು. ಎಫ್ಐಆರ್ ದಾಖಲಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿರಲಿಲ್ಲ.
ಇದನ್ನು ಪ್ರಶ್ನಿಸಿದಾಗ ಆರೋಪಿಗಳನ್ನು ಬಂಧಿಸಲು 4 ಲಕ್ಷ ಲಂಚ ನೀಡುವಂತೆ ಎಸಿಪಿ ತನ್ವೀರ್ ಹಾಗೂ ಎಎಸ್ಐ ಕೃಷ್ಣಮೂರ್ತಿ ಬೇಡಿಕೆ ಇಟ್ಟಿದ್ದರು. ಇದಕ್ಕೆ ಚೌಕಾಸಿ ಮಾಡಿದಾಗ 2 ಲಕ್ಷ ಹಣ ನಿಡಲು ಕೇಳಿದ್ದಾರೆ. ಈ ಬಗ್ಗೆ ಮಧುಸೂದನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
2 ಲಕ್ಷ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಪಿ ತನ್ವೀರ್ ಹಾಗೂ ಎಎಸ್ಐ ಕೃಷ್ಣಮೂರ್ತಿ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿಇದ್ದಿದ್ದು, ಇಬ್ಬರನ್ನು ಬಂಧಿಸಲಾಗಿದೆ.