Karnataka News

*ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಹೃದಯಾಘತದಿಂದ ವಿಧಿವಶರಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭತ್ತಗುತ್ತಿಗೆಯವರಾದ ವಿಶ್ವಾಮಿತ್ರ ಹೆಗಡೆ ದೂರದರ್ಶನ, ವಿಶ್ವವಾಣಿ, ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು.

ಹಲವು ಪತ್ರಿಕೆ, ವಾಹಿನಿಗಳಿಗೆ ಹುಬ್ಬಳ್ಳಿ ಬ್ಯೂರೋ ಮುಖ್ಯಸ್ಥರಾಗಿ, ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡಿದ್ದರು. ಹುಬ್ಬಳ್ಳಿಯಲ್ಲಿ ವಾಸವಾಗಿದ್ದ ವಿಶ್ವಾಮಿತ್ರ ಹೆಗಡೆ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

Home add -Advt


Related Articles

Back to top button