Kannada NewsKarnataka News

ಮೊಂಬತ್ತಿ ಬೆಳಗಿ ವೀರಯೋಧನಿಗೆ ಶೃದ್ಧಾಂಜಲಿ ಸಲ್ಲಿಸಿದ ಕರವೇ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗಿನ ಕಾರ್ಯಾಚರಣೆಯಲ್ಲಿ ಮೃತನಾದ ಯೋಧನಿಗೆ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶೃದ್ಧಾಂಜಲಿ ಸಲ್ಲಿಸಿತು.
ಉಚಗಾಂವ ಗ್ರಾಮದ ವೀರ ಯೋಧ ರಾಹುಲ್ ಸುಳಗೇಕರ್ 4 ದಿನಗಳ ಹಿಂದೆ ವೀರಣಮರಣ ಹೊಂದಿದ್ದ. ಅವರಿಗೆ ಇಂದು ಸಂಜೆ 6-30 ಘಂಟೆಗೆ ನಗರದ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಮೊಂಬತ್ತಿ ಬೆಳಗಿ ಶೃದ್ಧಾಂಜಲಿ ಅರ್ಪಿಸಿದರು.
ವೀರ ಯೋಧನ ಪ್ರತಿಮೆಯನ್ನು ಬೆಳಗಾವಿ ನಗರದಲ್ಲಿ ನಿರ್ಮಿಸುವಂತೆ  ಕರವೇ ಕಾರ್ಯಕರ್ತರು ಆಗ್ರಹಿಸಿದರು.
ರಕ್ಷಣಾ ವೇದಿಕೆಯ ಯುವಘಟಕದ ಜಿಲ್ಲಾ ಅಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ನಡೆದ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button