National

*ವಕ್ಫ್ ತಿದ್ದುಪಡಿ ಮಸೂದೆ ಮಂಡನೆ*

ಪ್ರಗತಿವಾಹಿನಿ ಸುದ್ದಿ: ವಿಪಕ್ಷಗಳ ವಿರೋಧದ ನಡುವೆಯೂ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜುಜು ಮಸೂದೆ ಮಂಡಿಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವರು, 1995ರಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಪರಿಚಯಿಸಿದಾಗ ಯಾರೂ ವಿರೋಧಿಸಿರಲಿಲ್ಲ. ಈ ಹಿಂದೆಯೂ ಹಲವುಬಾರಿ ತಿದ್ದುಪಡಿಯಾಗಿದ್ದು ವಿರೋಧಗಳು ಬಂದಿರಲಿಲ್ಲ. ಈಗ ನಾವು ಮಸೂದೆ ಮಂಡಿಸುತ್ತಿದ್ದಂತೆ ಅಸಂವಿಧಾನಿಕ ಎಂದು ವಿಪಕ್ಷಗಳು ಗಲಾಟೆ ಮಾಡುತ್ತಿರುವುದು ಸರಿಯಲ್ಲ ಎಂದರು.

ವಕ್ಫ್ ತಿದ್ದುಪಡಿ ಮಸೂದೆ ವಿಚಾರವಾಗಿ 25 ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಲಾಗಿದೆ. ಮಸೂದೆ ಕುರಿತು 95ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಈ ಮಸೂದೆ ಬಗ್ಗೆ ನಡೆದಷ್ಟು ಚರ್ಚೆ ಬೇರೆ ಯಾವುದಕ್ಕೂ ನಡೆದಿಲ್ಲ. ಸಂಸದೀಯ ಜಂಟಿ ಸಮಿತಿಯಲ್ಲಿಯೂ ವಿಧೇಯಕದ ಬಗ್ಗೆ ಚರ್ಚೆಯಾಗಿದೆ ಎಂದರು.

Home add -Advt

Related Articles

Back to top button